Publish Date: Wed, 21 Dec 2022 (09:54 IST)
Updated Date: Wed, 21 Dec 2022 (01:56 IST)
ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ವರ್ಷದ ಕೊನೆಯಲ್ಲಿ ಆಟೋ ಚಾಲಕರು ಶಾಕ್ ನೀಡಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 29 ರಿಂದ ಆಟೋ ಚಾಲಕರು ಆಟೋ ಸಂಚಾರ ಬಂದ್ ಮಾಡಲು ತೀರ್ಮಾನಿಸಿದ್ದು, ಆಟೋ ಓಡಾಟ ಬಹುತೇಕ ಸ್ತಬ್ಧವಾಗುವ ಸಾಧ್ಯತೆ ಇದೆ.
ಬರುವ ಹೊಸ ವರ್ಷವನ್ನು ಅದ್ಧೂರಿಯಿಂದ ಸ್ವಾಗತಿಸುವ ಖುಷಿಯಲ್ಲಿದ್ದ ಜನರಿಗೆ ಆಟೋ ಚಾಲಕರು ಶಾಕ್ ಕೊಟ್ಟಿದ್ದಾರೆ. ಸಾರಿಗೆ ಇಲಾಖೆ ರ್ಯಾಪಿಡೊ ಬೈಕ್, ಟ್ಯಾಕ್ಸಿ ಬ್ಯಾನ್ ಮಾಡಬೇಕು,
ಬೌನ್ಸ್ ಎಲೆಕ್ಟ್ರಿಕ್ ಬೈಕ್ಗೆ ನೀಡಿರುವ ಅನುಮತಿ ತೆಗೆದುಹಾಕಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಡಿ.29ಕ್ಕೆ ಸಂಪೂರ್ಣ ಆಟೋ ಓಡಾಟ ಸ್ಥಗಿತಗೊಳಿಸಲು ತೀರ್ಮಾನಿಸಿದ್ದು, ಬರೊಬ್ಬರಿ ನಗರದ 2 ಲಕ್ಷ ಆಟೋ ಚಾಲಕರು ಬೆಂಬಲ ಸೂಚಿಸಿದ್ದಾರೆ.