Publish Date: Thu, 08 Sep 2022 (06:16 IST)
Updated Date: Wed, 07 Sep 2022 (23:56 IST)
ಬೆಳಗಾವಿ : ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆ ಹುಕ್ಕೇರಿಯ ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ತೋಟದ ಮನೆಯಲ್ಲಿ ಸಂಜೆ ನೆರವೇರಿತು.
ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಧಾರ್ಮಿಕ ಪದ್ಧತಿಯಂತೆ ಅಂತಿಮ ವಿಧಿ ವಿಧಾನ ನೆರವೇರಿತು.
ವೀರಶೈವ ಲಿಂಗಾಯತ ಪದ್ಧತೆಯಂತೆ ಅಂತಿಮ ವಿಧಿವಿಧಾನವನ್ನು ಬೆಲ್ಲದ ಬಾಗೇವಾಡಿ ಗ್ರಾಮದ ಮಹಾಂತ ವಿರಕ್ತ ಮಠದ ಶಿವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.
ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಉಮೇಶ್ ಕತ್ತಿಯವರನ್ನು ಸಮಾಧಿ ಮಾಡಲಾಯಿತು. ಪುತ್ರ ನಿಖಿಲ್ ಅಂತಿಮ ವಿಧಿವಿಧಾನ ನೆರವೇರಿಸಿದ್ರು.
ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ್, ಮುನಿರತ್ನ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು, ಉತ್ತರ ಕರ್ನಾಟಕದ ಪ್ರಮುಖ ಮಠಗಳ ಸ್ವಾಮೀಜಿಗಳು ಭಾಗವಹಿಸಿದ್ದರು.