Webdunia - Bharat's app for daily news and videos

Install App

ಕಾಫಿನಾಡಲ್ಲಿ ಪ್ರವಾಸಿಗರಿಗೆ ನಿಷೇಧ!

Webdunia
ಸೋಮವಾರ, 5 ಡಿಸೆಂಬರ್ 2022 (11:34 IST)
ಚಿಕ್ಕಮಗಳೂರು : ಡಿ. 6,7,8 ರಂದು ತಾಲೂಕಿನ ದತ್ತಪೀಠದಲ್ಲಿ ನಡೆಯುವ ದತ್ತಜಯಂತಿ ಹಿನ್ನೆಲೆ ಡಿಸೆಂಬರ್ 5ರ ಬೆಳಗ್ಗೆ 6 ಗಂಟೆಯಿಂದ ಡಿ.9ರ ಬೆಳಗ್ಗೆ 10 ಗಂಟೆಯವರೆ ಮುಳ್ಳಯ್ಯನಗಿರಿ ಭಾಗದ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದ್ದಾರೆ.

ಡಿಸೆಂಬರ್ 6 ರಿಂದ ಮೂರು ದಿನಗಳ ಕಾಲ ನಡೆಯಲಿರುವ ದತ್ತಜಯಂತಿ ಹಿನ್ನೆಲೆ ಜಿಲ್ಲಾದ್ಯಂತ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಭಕ್ತಾಧಿಗಳ ಅನುಕೂಲಕ್ಕೆ ಜಿಲ್ಲಾಡಳಿತ,

ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯಿಂದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸುಗಮ ಸಂಚಾರ ದೃಷ್ಟಿಯಿಂದ ರಸ್ತೆ ದುರಸ್ಥಿ ಕಾರ್ಯವೂ ಪೂರ್ಣಗೊಂಡಿದೆ.

ತಾತ್ಕಾಲಿಕ ಆರೋಗ್ಯ ಸೌಲಭವನ್ನು ಒದಗಿಸಲು 3 ದಿನದ ಮಟ್ಟಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗುವುದು. ಹೊನ್ನಮ್ಮನ ಹಳ್ಳದಲ್ಲಿ ಭಕ್ತರು ಸ್ನಾನ ಮಾಡಲು ಮೆಟ್ಟಿಲು, ಕಟ್ಟೆ ನಿರ್ಮಾಣ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments