Select Your Language

Notifications

webdunia
webdunia
webdunia
webdunia

ಸಾವಿನಲ್ಲೂ ಶತಕ ಬಾರಿಸಿದ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ಹೈವೇ

ಸಾವಿನಲ್ಲೂ ಶತಕ ಬಾರಿಸಿದ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ಹೈವೇ
ಬೆಂಗಳೂರು , ಶುಕ್ರವಾರ, 23 ಜೂನ್ 2023 (13:59 IST)
ರಾಮನಗರ : ರಾಜ್ಯದ ರಾಜಧಾನಿ ಮತ್ತು ಸಾಂಸ್ಕೃತಿಕ ನಗರಿಯ ನಡುವಿನ ಸಂಚಾರದ ಸಮಯ ತಗ್ಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಆರಂಭಗೊಂಡ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
 
4 ತಾಸುಗಳ ಬೆಂಗಳೂರು-ಮೈಸೂರು ನಡುವಿನ ಪ್ರಯಾಣ ಸಮಯದಲ್ಲಿ 75 ನಿಮಿಷಗಳಿಗೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಆರಂಭಗೊಂಡ ಎಕ್ಸ್ಪ್ರೆಸ್ ವೇಯಲ್ಲಿ ನಿರಂತರ ಅಪಘಾತಗಳು ಸಂಭವಿಸುತ್ತಿವೆ. 

2022ರ ಸೆಪ್ಟೆಂಬರ್ ಮೊದಲ ವಾರದಿಂದ ಹೆದ್ದಾರಿಯಲ್ಲಿ ಸಂಚಾರ ಆರಂಭಿಸಲಾಗಿತ್ತು. ಅಂದಿನಿಂದ ಇಲ್ಲಿಯವರೆಗೆ 849 ರಸ್ತೆ ಅಪಘಾತಗಳು ಸಂಭವಿಸಿ 155 ಮಂದಿ ಸಾವಿಗೀಡಾಗಿದ್ದು, 213 ಮಂದಿ ತೀವ್ರ ಗಾಯಗೊಂಡಿದ್ದಾರೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಇದುವರೆಗೆ 279 ಅಪಘಾತಗಳು ಸಂಭವಿಸಿದ್ದು, 100 ಮಂದಿ ಸಾವಿಗೀಡಾಗಿದ್ದರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಿಸ್‌ ಬ್ಯಾಂಕ್‌ನಲ್ಲಿ ಭಾರತೀಯರ ಠೇವಣಿ 11% ಇಳಿಕೆ