Webdunia - Bharat's app for daily news and videos

Install App

ಬೆಂಗಳೂರು ರೇಪ್ಕೇಸ್ ಮರು ವಿಚಾರಣೆ!

Webdunia
ಭಾನುವಾರ, 18 ಜುಲೈ 2021 (15:43 IST)
ನವದೆಹಲಿ(ಜು.18): ಅತ್ಯಾಚಾರ ಆರೋಪಿ ತನ್ನನ್ನು ಮದುವೆ ಆಗುವುದಾಗಿ ಒಪ್ಪಿದ್ದ ಕಾರಣಕ್ಕೆ ಈ ಹಿಂದೆ ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದ ಪ್ರಕರಣವನ್ನು ಪುನಃ ವಿಚಾರಣೆ ನಡೆಸುವಂತೆ ಕೋರಿ ಸಂತ್ರಸ್ತ ಯುವತಿ ದಾಖಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ.



* ರಾಜಿ ಆಗಿ ರದ್ದಾಗಿದ್ದ ಪ್ರಕರಣ'
* ಬೆಂಗಳೂರು ರೇಪ್ಕೇಸ್ ಮರು ವಿಚಾರಣೆ: ಸುಪ್ರಿಂ ಕೋರ್ಟ್ ಸಮ್ಮತಿ
* ಕರ್ನಾಟಕ ಸರ್ಕಾರ, ಆರೋಪಿಗೆ ನೋಟಿಸ್ ಜಾರಿ

ಈ ಸಂಬಂಧ ಕರ್ನಾಟಕ ಸರ್ಕಾರ ಮತ್ತು ಅತ್ಯಾಚಾರ ಆರೋಪಿ ಆದ ಎಂಬಿಬಿಎಸ್ ವಿದ್ಯಾರ್ಥಿಯಿಂದ ಸುಪ್ರೀಂಕೋರ್ಟ್ ಪ್ರತಿಕ್ರಿಯೆ ಕೇಳಿದೆ.
ಏನಿದು ಪ್ರಕರಣ?:
ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಆದ ಆರೋಪಿ, ಮದುವೆ ಆಗುವುದಾಗಿ ನಂಬಿಸಿ ಸಂತ್ರಸ್ತೆಯ ಜೊತೆ ಲೈಂಗಿಕ ಸಂಬಂಧ ಹೊಂದಿದ್ದ. ಆದರೆ, ಬಳಿಕ ಆತ ಮದುವೆಗೆ ನಿರಾಕರಿಸಿದ ಕಾರಣಕ್ಕೆ ಆತನ ವಿರುದ್ಧ ದೂರು ದಾಖಲಾಗಿತ್ತು. ಬಳಿಕ 2017-2018ರಲ್ಲಿ ಇವರಿಬ್ಬರೂ ರಾಜಿ ಆಗಿ ಮದುವೆ ಆಗಲು ಒಪ್ಪಿದ್ದ ಕಾರಣಕ್ಕೆ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿತ್ತು.
ತನ್ನ ವಿರುದ್ಧದ ಪ್ರಕರಣ ರದ್ದಾದ ಬಳಿಕ ವರಸೆ ಬದಲಿಸಿದ ಆರೋಪಿ, ಸಂತ್ರಸ್ತೆಯನ್ನು ಮದುವೆ ಆಗಲು 1 ಕೋಟಿ ರು. ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದ. ಹೀಗಾಗಿ ಸಂತ್ರಸ್ತೆ ಮದುವೆಗೆ ನಿರಾಕರಿಸಿದ್ದಳು.
ಇದೀಗ ತಾನು ಈ ಹಿಂದೆ ಆರೋಪಿಯ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ದೂರಿನ ಮರು ವಿಚಾರಣೆ ಮಾಡುವಂತೆ ಕೋರಿ ಸಂತ್ರಸ್ತೆ ಸುಪ್ರಿಂಕೋರ್ಟ್ನಲ್ಲಿ ಅರ್ಜಿ ದಾಖಲಿಸಿದ್ದಾರೆ.
ರಾಜೀ ಮತ್ತು ಸಂಧಾನದ ಆಧಾರದ ಮೇಲೆ ಪ್ರಕರಣವನ್ನು ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ನ ತೀರ್ಪಿಗೆ ವಿರುದ್ಧವಾಗಿ ಕರ್ನಾಟಕ ಹೈಕೋರ್ಟ್ ಈ ಪ್ರಕರಣದಲ್ಲಿ ತೀರ್ಪು ಪ್ರಕಟಿಸಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಸಂತ್ರಸ್ತೆಯ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಸುಪ್ರಿಂಕೋರ್ಟ್, ಕರ್ನಾಟಕ ಸಕಾರ ಮತ್ತು ಅತ್ಯಾಚಾರ ಆರೋಪಿಗೆ ನೋಟಿಸ್ ಜಾರಿ ಮಾಡಿ ಒಂದು ತಿಂಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ