ಇನ್ಮುಂದೆ ಕಸದ ವಾಹನಗಳ ಮೇಲೆ BBMP ನಾಮಫಲಕ ಹಾಕುವಂತಿಲ್ಲ !

Webdunia
ಶನಿವಾರ, 23 ಜುಲೈ 2022 (10:25 IST)
ಬೆಂಗಳೂರು : ನಗರ ಪ್ರದೇಶದಲ್ಲಿ ಪದೇ ಪದೇ ಕಸದ ಲಾರಿಗಳು ಮಾಡುತ್ತಿರುವ ಅಪಘಾತಗಳಿಂದ ಮುಜುಗರಕ್ಕೀಡಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಸಮಸ್ಯೆಯಿಂದ ಪಾರಾಗಲು ಹೊಸ ತಂತ್ರ ರೂಪಿಸಿದೆ.

ಕಸದ ವಾಹನಗಳಿಗೆ ಹೊಸ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ಪಾಲಿಕೆ ವ್ಯಾಪ್ತಿಯ ಕಸದ ವಾಹನಗಳ ಮೇಲೆ ಬಿಬಿಎಂಪಿ ನಾಮಫಲಕ ಹಾಕುವಂತಿಲ್ಲ. ಗುತ್ತಿಗೆದಾರರ ಮೂಲಕ ಸರಬರಾಜು ಮಾಡಲಾದ ಎಲ್ಲ ವಾಹನಗಳಿಗೂ ಆದೇಶ ಅನ್ವಯವಾಗಲಿದೆ.

ಒಂದೊಮ್ಮೆ ಸದರಿ ಕಸದ ವಾಹನಗಳಿಂದ ಅಪಘಾತ ಸಂಭವಿಸಿ ಸಾವು ನೋವಾದರೆ, ದಂಡದ ರೂಪದಲ್ಲಿ ಆ ವಾಹನ ಮಾಲೀಕರೇ ಪರಿಹಾರ ನೀಡಬೇಕು ಎಂದು ಬಿಬಿಎಂಪಿ ಘನತ್ಯಾಜ್ಯ ವಿಶೇಷ ಆಯುಕ್ತ ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. 

ಪಾಲಿಕೆಗೆ ಸಂಬಂಧಿಸದ ಅನಾಮಧೇಯ ವಾಹನಗಳ ಮೇಲೆ ಪಾಲಿಕೆಯ ಸೇವೆಯಲ್ಲಿ, ಬಿಬಿಎಂಪಿ, ಬಿಬಿಎಂಪಿ ಸೇವೆಯಲ್ಲಿ ಎಂಬ ನಾಮಫಲಕವನ್ನು ಹಾಕಿದ್ದಲ್ಲಿ ಅಂತಹ ವಾಹನಗಳ ಚಾಲಕರ ಮೇಲೆ ಮತ್ತು ಮಾಲೀಕರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments