ಓಬಿಸಿ ನೀತಿಯಡಿ ಬಿಬಿಎಂಪಿ ಚುನಾವಣೆ : ಸುಪ್ರೀಂ

Webdunia
ಗುರುವಾರ, 19 ಮೇ 2022 (07:23 IST)
ಬೆಂಗಳೂರು : ರಾಜ್ಯದಲ್ಲೀಗ ಬಿಬಿಎಂಪಿ ಚುನಾವಣೆಯದ್ದೇ ದೊಡ್ಡ ತಲೆನೋವಾಗಿ ಹೋಗಿದೆ.

ಒಂದ್ಕಡೆ ಚುನಾವಣೆ ನಡೆಸೋಕೆ ಒತ್ತಡ ಹೇರ್ತಿದ್ರೆ, ಮತ್ತೊಂದ್ಕಡೆ ಚುನಾವಣೆ ಮುಂದೂಡಲು ಸರ್ಕಾರ ಪ್ರಯತ್ನಿಸ್ತಿದ್ಯಾ ಎಂಬ ಮಾತು ಕೇಳಿ ಬರುತ್ತಿದೆ.

ಈ ಮಧ್ಯೆ ಸುಪ್ರೀಂಕೋರ್ಟ್ ತನ್ನ ಮರು ಆದೇಶದಲ್ಲೂ, ಹಾಲಿ ಓಬಿಸಿ ನೀತಿಯಡಿ ಚುನಾವಣೆ ನಡೆಸಬೇಕು. ಯಾವುದೇ ಕುಂಟುನೆಪ ಹೇಳಿ ಚುನಾವಣೆ ಮುಂದೂಡಬಾರದು ಎಂದಿದೆ. ಈ ಹಿಂದಿನ ಆದೇಶ ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರವು ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತನ್ನ ಹಿಂದಿನ ಆದೇಶ ಎತ್ತಿ ಹಿಡಿದಿದೆ. ನಿಖರ ಅಂಕಿ ಅಂಶಗಳ ಆಧಾರದ ಮೇಲೆ ಪರಿಶೀಲನೆ ನಡೆಸಬೇಕು. ಆ ಬಳಿಕವೇ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗದ ಜನರಿಗೆ ಶೇ. 27ರಷ್ಟು ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. 

ಹಾಲಿ ಮೀಸಲಾತಿ ಅನ್ವಯವೇ 1 ವಾರದಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಆದೇಶ ನೀಡಿದೆ. ಸುಪ್ರೀಂಕೋರ್ಟ್ ಮರು ಆದೇಶದಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರು: ಅವರನ್ನು ಓಡಿಸಲು ಎಸ್‌ಐಆರ್ ಜಾರಿಗೊಳಿಸಲು ಯತ್ನಾಳ್ ಒತ್ತಾಯ

ಬಾಹ್ಯಾಕಾಶದಲ್ಲಿ ಭಾರತದ ಪತಾಕೆ ಹಾರಿಸಿದ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಅಶೋಕ ಚಕ್ರ ಗೌರವ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments