Select Your Language

Notifications

webdunia
webdunia
webdunia
webdunia

ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ತಂಡ ದಾಳಿ

ತೆರಿಗೆ
ಬೆಂಗಳೂರು : 42.63 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಈ ಹಿಂದೆಯೇ ಮಂತ್ರಿ ಮಾಲ್ ಕೊಟ್ಟಿದ್ದ ಚೆಕ್ ಬೌನ್ಸ್ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ನೋಟಿಸ್ ಕೊಟ್ಟಿದ್ದರೂ ತೇರಿಗೆ ಕಟ್ಟದ ಮಂತ್ರಿ ಮಾಲ್ ಮೇಲೆ ಬಿಬಿಎಂಪಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಮಾಲ್ನಲ್ಲಿರುವ ಕಚೇರಿ ವಸ್ತುಗಳನ್ನ ವಶಪಡಿಸಿಕೊಳ್ಳೋದಕ್ಕೆ ಬಿಬಿಎಂಪಿ ಮುಂದಾಗಿದೆ. 

ಪೊಲೀಸ್ ಮತ್ತು ಮಾರ್ಷಲ್ ನೇತೃತ್ವದಲ್ಲಿ ದಿಢೀರ್ ದಾಳಿ ಮಾಡಿರುವ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಕಚೇರಿಯ ಲ್ಯಾಪ್ಟಾಪ್, ಕಂಪ್ಯೂಟರ್, ಚೇರ್, ಟೇಬಲ್, ಮ್ಯೂಯೆಬಲ್ ಸೇರಿದಂತೆ ಎಲ್ಲಾ ಯಂತ್ರೋಪಕರಣ ವಸ್ತುಗಳನ್ನ ವಶಕ್ಕೆ ಪಡೆದುಕೊಳ್ಳುತ್ತಿದೆ. 

ಮಾರ್ಗಸೂಚಿ ಪ್ರಕಾರವೇ ದಾಳಿ ಮಾಡಿದ್ದು, ಇನ್ನಷ್ಟು ವಸ್ತುಗಳನ್ನ ವಶಪಡಿಸಿಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತಕ್ಕೆ ಮತ್ತೆ ಚೀತಾಗಳ ಆಗಮನ