Select Your Language

Notifications

webdunia
webdunia
webdunia
webdunia

ಕರ್ನಾಟಕಕ್ಕೆ "ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ" ಪ್ರಶಸ್ತಿ

ಕರ್ನಾಟಕಕ್ಕೆ
ಬೆಂಗಳೂರು , ಭಾನುವಾರ, 3 ಅಕ್ಟೋಬರ್ 2021 (10:31 IST)
ಬೆಂಗಳೂರು : ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ದಿ ಇಂಡಿಯಾ ಟುಡೇ ಗ್ರೂಪ್ ನಿಂದ ನೀಡಲಾಗುತ್ತಿರುವ ‘ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ವಿಭಾಗದ ಇಂಡಿಯಾ ಟುಡೇ ಹೆಲ್ತ್ ಗಿರಿ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದೆ.

ಈ ಪ್ರಯುಕ್ತ ಇಂದು ನಡೆದ ಸಮಾರಂಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿದೆ. ಆರೋಗ್ಯ ಮೂಲಸೌಕರ್ಯ ಹೆಚ್ಚಳ, ಪರೀಕ್ಷೆ ಸಂಖ್ಯೆ ಹೆಚ್ಚಳ, ದಾಖಲೆ ಮಟ್ಟದಲ್ಲಿ ಕೋವಿಡ್ ಲಸಿಕೆ ನೀಡಿರುವುದು, ಪೋಸ್ಟ್ ಕೋವಿಡ್ ತಪಾಸಣೆ ಮೊದಲಾದ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಈ ಪ್ರಶಸ್ತಿಯ ಗೌರವ ಲಭ್ಯವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಕಷ್ಟ ಕೇಳದ ಪ್ರಧಾನಿ ಮೋದಿ: ಡಿ.ಕೆ.ಶಿವಕುಮಾರ್