ಗಾಂಧಿನಗರ : ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ- ಕಾಲೇಜುಗಳಲ್ಲಿ ಭಗವದ್ಗೀತೆ ಕಡ್ಡಾಯ ಮಾಡಲು ಗುಜರಾತ್ ಸರ್ಕಾರ ಮುಂದಾಗಿದೆ.
ಆರನೇ ತರಗತಿಯಿಂದ 12ನೇ ತರಗತಿವರೆಗೂ ಹಿಂದೂ ಧರ್ಮಗ್ರಂಥ ಭಗವದ್ಗೀತೆಯನ್ನು ಬೋಧಿಸುವುದು, ಪಠಣ ಮಾಡಲಾಗುತ್ತದೆ.
ಭಗವದ್ಗೀತೆ ಎನ್ನುವುದು ಕೇವಲ ಗ್ರಂಥವಲ್ಲ. ಅದೊಂದು ಜೀವನ ವಿಧಾನ. ನಮ್ಮ ಸಂಸ್ಕೃತಿಯ ಪ್ರತೀಕ. ಇದು ಎಲ್ಲರಿಗೂ ಗೊತ್ತಾಗುವುದು ಅತ್ಯಗತ್ಯ ಎಂದು ಶಿಕ್ಷಣ ಸಚಿವ ಜಿತು ವಘಾನಿ ತಿಳಿಸಿದ್ದಾರೆ.
ಭಗವದ್ಗೀತೆಯಿಂದ ಕಲಿಯುವುದು ಬೇಕಾದಷ್ಟಿದೆ. ಹೀಗಾಗಿ ಶಾಲೆಗಳಲ್ಲಿ ಅಳವಡಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲರ ಮನೆಯಲ್ಲಿ ಭಗವದ್ಗೀತೆ ಇರಬೇಕು ಮತ್ತು ಪಠಣ ನಡೆಸಬೇಕು.