Webdunia - Bharat's app for daily news and videos

Install App

ಭಾರತ್ ಬಂದ್; ಬೆಂಗಳೂರಲ್ಲಿ ಸಂಚಾರ ಮಾರ್ಗ ಬದಲು

Webdunia
ಭಾನುವಾರ, 26 ಸೆಪ್ಟಂಬರ್ 2021 (14:03 IST)
ಬೆಂಗಳೂರು, ಸೆ 26 : ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದೆ. ಬೆಂಗಳೂರಿನಲ್ಲಿ ಸಹ ಬಂದ್ಗೆ ಬೆಂಬಲಿಸಿ ಬೃಹತ್ ಜಾಥಾ ನಡೆಸಲಾಗುತ್ತದೆ. ಇದರಿಂದಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುವ ನಿರೀಕ್ಷೆ ಇದೆ.

ಬೆಂಗಳೂರು ಸಂಚಾರಿ ಪೊಲೀಸರು ಸೆಪ್ಟೆಂಬರ್ 27ರಂದು ರೈತರು ಜಾಥಾ ಹಮ್ಮಿಕೊಂಡಿರುವುದರಿಂದ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದಾರೆ. ಮೆಜೆಸ್ಟಿಕ್, ಆನಂದ್ ರಾವ್ ವೃತ್ತ, ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ನಡೆಸುವುದನ್ನು ವಾಹನ ಸವಾರರು ಸಂಚಾರ ಮಾರ್ಗ ಬದಲಾವಣೆ ಬಗ್ಗೆ ಮಾಹಿತಿ ತಿಳಿಯುವುದು ಅಗತ್ಯವಾಗಿದೆ.
ಕೆ. ಜಿ. ರಸ್ತೆಯಲ್ಲಿ ಹಲಸೂರು ಪೊಲೀಸ್ ಠಾಣೆ ಕಡೆಯಿಂದ ಬಂದು ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದುಕೊಂಡು ಕೆ. ಜಿ. ರಸ್ತೆ ಕಡೆಗೆ ಸಾಗುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ಹಾಗೆಯೇ ನೃಪತುಂಗ ರಸ್ತೆ ಮೂಲಕ ಬಂದು ಪೊಲೀಸ್ ಕಾರ್ನರ್ ಬಳಿ ಬಲ ತಿರುವು ಪಡೆದು ಕೆ. ಜಿ. ರಸ್ತೆ ಸಾಗುವ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರ್ಯಾಯ ವ್ಯವಸ್ಥೆ; ಹಲಸೂರು ಗೇಟ್ ಪೊಲೀಸ್ ಠಾಣೆ ಕಡೆಯಿಂದ ಬಂದು ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದುಕೊಂಡು ಕೆ. ಜಿ. ರಸ್ತೆ ಕಡೆಗೆ ಸಾಗುವ ವಾಹನಗಳು ಪೊಲೀಸ್ ಕಾರ್ನರ್ ವೃತ್ತದಿಂದ ನೇರವಾಗಿ ನೃಪತುಂಗ ರಸ್ತೆಗೆ ಪವೇಶ ತೆಗೆದುಕೊಂಡು ನೃಪತುಂಗ ರಸ್ತೆಯಲ್ಲಿ ಸಾಗಿ ಕೆ. ಆರ್. ವೃತ್ತ ತಲುಪಿ ಮುಂದುವರೆಯಲು ಅನುವು ಮಾಡಿಕೊಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments