Select Your Language

Notifications

webdunia
webdunia
webdunia
webdunia

ಇಂದು ಮಧ್ಯಾಹ್ನ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ

ಇಂದು ಮಧ್ಯಾಹ್ನ ಭೂಪೇಂದ್ರ ಪಟೇಲ್ ಅಧಿಕಾರ ಸ್ವೀಕಾರ
ಗಾಂಧಿನಗರ (ಗುಜರಾತ್) , ಸೋಮವಾರ, 13 ಸೆಪ್ಟಂಬರ್ 2021 (11:45 IST)
ಗಾಂಧಿನಗರ (ಗುಜರಾತ್): ಗುಜರಾತ್ನ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೋಮವಾರ ಮಧ್ಯಾಹ್ನ 2.20ಕ್ಕೆ ರಾಜ್ಯದ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ 59ರ ಹರೆಯದ ಭೂಪೇಂದ್ರ ಪಟೇಲ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು.
ಭೂಪೇಂದ್ರ ಪಟೇಲ್ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ ಅವರು ಪ್ರಮಾಣ ವಚನ ಸ್ವೀಕರಿಸುವಂತೆ ಭೂಪೇಂದ್ರ ಪಟೇಲ್ ಅವರನ್ನು ಭಾನುವಾರ ಆಹ್ವಾನಿಸಿದ್ದಾರೆ.
'ಬಿಜೆಪಿಯ ನೂತನ ಶಾಸಕಾಂಗ ಪಕ್ಷದ ನಾಯಕ ಭೂಪೇಂದ್ರ ಭಾಯ್ ಪಟೇಲ್, ತಮ್ಮ ನಾಯಕತ್ವದಲ್ಲಿ ನೂತನ ಸರ್ಕಾರ ರಚಿಸುವುದಾಗಿ ಪ್ರಸ್ತಾವನೆ ಸಲ್ಲಿಸಿದ್ದಾರೆ. ಆ ಪ್ರಸ್ತಾವನೆಯನ್ನು ಸ್ವೀಕರಿಸಿ, ಸೆ.13 ರಂದು ಮಧ್ಯಾಹ್ನ 2.20ಕ್ಕೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಪಟೇಲ್ ಅವರನ್ನು ಆಹ್ವಾನಿಸಿದ್ದೇನೆ' ಎಂದು ರಾಜ್ಯಪಾಲರು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. 'ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮಗಳು ಮುಂದುವರಿಯಲಿವೆ' ಎಂದು ಶಾ ಟ್ವೀಟ್ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ!