Publish Date: Tue, 29 May 2018 (13:15 IST)
Updated Date: Tue, 29 May 2018 (13:17 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ತಲೆನೋವಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಮತ್ತೊಂದು ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಶಾಕ್ ಸಿಕ್ಕಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನ ಇಬ್ಬರು ಶಾಸಕರು ಸೇರಿದಂತೆ ಒಟ್ಟು 11 ಶಾಸಕರು ಮೈತ್ರಿ ಸರ್ಕಾರಕ್ಕೆ ಕೈ ಕೊಡಲು ಸಿದ್ಧರಾಗಿದ್ದಾರೆ ಎನ್ನಲಾಗಿದ್ದು, ಈ ಶಾಸಕರೆಲ್ಲಾ ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎಂದು ಗುಪ್ತಚರ ಇಲಾಖೆ ಸಿಎಂ ಕುಮಾರಸ್ವಾಮಿಗೆ ವರದಿ ನೀಡಿದೆ.
ಈ ಹಿನ್ನಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಈ ಶಾಸಕರಿಗೆ ಮಣೆ ಹಾಕುವ ನಿರೀಕ್ಷೆಯಿದೆ. ಈ ಮೂಲಕ ಇವರು ಪಕ್ಷ ಬಿಟ್ಟು ಹೋಗದಂತೆ ತಡೆಯುವ ಪ್ರಯತ್ನ ನಡೆಸಬಹುದು. ಇಲ್ಲವಾದರೆ ಮೈತ್ರಿ ಸರ್ಕಾರ ಉರುಳಿ ಬೀಳುವುದು ಖಚಿತವಾಗಲಿದೆ.
ರಾಜಶೇಖರ ಪಾಟೀಲ್, ಬಿಸಿ ಪಾಟೀಲ್, ಆನಂದ್ ಸಿಂಗ್, ಕಂಪ್ಲಿ ಶಾಸಕ ಗಣೇಶ್, ಪ್ರತಾಪ್ ಗೌಡ ಪಾಟೀಲ್, ಶಿವರಾಮ್ ಹೆಬ್ಬಾರ್, ಬಿ ಕೆ ಸಂಗಮೇಶ್ ಮುಂತಾದ ಶಾಸಕರು ಗುಪ್ತಚರ ಇಲಾಖೆಯ ವರದಿಯ ಪಟ್ಟಿಯಲ್ಲಿರುವ ಶಾಸಕರಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.