Select Your Language

Notifications

webdunia
webdunia
webdunia
webdunia

ಐದು ಗ್ಯಾರಂಟಿ ಜಾರಿಗೆ ಅಬಕಾರಿ ಇಲಾಖೆಗೆ ಬಿಗ್ ಟಾರ್ಗೆಟ್!

ಐದು ಗ್ಯಾರಂಟಿ ಜಾರಿಗೆ ಅಬಕಾರಿ ಇಲಾಖೆಗೆ ಬಿಗ್ ಟಾರ್ಗೆಟ್!
ಬೆಂಗಳೂರು , ಮಂಗಳವಾರ, 20 ಜೂನ್ 2023 (08:03 IST)
ಬೆಂಗಳೂರು : ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಘೋಷಿರುವ ಸಿದ್ದರಾಮಯ್ಯ ಸರ್ಕಾರ ಈಗ ಆರ್ಥಿಕ ಸಂಪನ್ಮೂಲಗಳನ್ನು ಹೊಂದಿಸಲು ಪ್ರಯತ್ನ ಮಾಡುತ್ತಿದ್ದು, ಅಬಕಾರಿ ಇಲಾಖೆಗೆ ಈ ಬಾರಿ ಬಿಗ್ ಟಾರ್ಗೆಟ್ ನೀಡಲು ಸರ್ಕಾರ ಮುಂದಾಗಿದೆ.

ಈ ಹಣಕಾಸು ವರ್ಷದಲ್ಲಿ 40 ಸಾವಿರ ಕೋಟಿ ರೂ.ಆದಾಯ ಸಂಗ್ರಹದ ಟಾರ್ಗೆಟ್ ನೀಡಲು ಸಿದ್ದತೆ ನಡೆಸಿದೆ. ಬಿಜೆಪಿ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ಅಬಕಾರಿ ಇಲಾಖೆಯಿಂದ 35 ಸಾವಿರ ಕೋಟಿ ಗುರಿ ನೀಡಲಾಗಿತ್ತು.

 ಇದೇ ವೇಳೆ ಆಸ್ತಿಗಳ ಮಾರ್ಗಸೂಚಿ ದರ ಹೆಚ್ಚಳ ಮಾಡುವ ಸುಳಿವನ್ನು ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ ನೀಡಿದ್ದಾರೆ. ಶೀಘ್ರವೇ ಆಸ್ತಿ ಮಾರ್ಗಸೂಚಿ ದರ ಹೆಚ್ಚಳ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. 

2018 ರಿಂದ ಕರ್ನಾಟಕದಲ್ಲಿ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ ಆಗಿಲ್ಲ. ಇದರಿಂದ ರೈತರಿಗೂ, ಮಾರಾಟಗಾರರಿಗೂ ಅನ್ಯಾಯ ಆಗುತ್ತಿದೆ. ಶೀಘ್ರವೇ ಮಾರುಕಟ್ಟೆ ದರಕ್ಕೆ ತಕ್ಕಂತೆ ಮಾರ್ಗಸೂಚಿ ದರ ಬದಲಾವಣೆ ಮಾಡುತ್ತೇವೆ ಎಂದಿದ್ದಾರೆ.

ಆದಾಯ ಸಂಗ್ರಹದ ಟಾರ್ಗೆಟ್ ಯಾವ ಇಲಾಖೆಗೆ ಎಷ್ಟು ಎನ್ನುವುದು ಜುಲೈನಲ್ಲಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ನಲ್ಲಿ ತಿಳಿಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ಕ್ಕೆ ಕರ್ನಾಟಕ ಬಂದ್‌ಗೆ ಕರೆ