ಬೆಂಗಳೂರು, ಸೆ.8 : ಬೈಕ್ , ಟಿವಿ , ಫ್ರಿಜ್ ಹೊಂದಿರುವ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿ ಹೊಂದಲು ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಲ್ಲಿ ಅವಕಾಶವಿರುವುದರಿಂದ ಬೈಕ್ , ಟಿವಿ , ಫ್ರಿಜ್ ಹೊಂದಿರುವವರ ಅಂತ್ಯೋದಯ ಅನ್ನ ಯೋಜನೆ ( ಎಎವೈ ) ಮತ್ತು ಬಿಪಿಎಲ್ (ಆದ್ಯತಾ) ಪಡಿತರ ಚೀಟಿ ರದ್ದುಪಡಿಸಿಲ್ಲ ಎಂದು ಆಹಾರ ಇಲಾಖೆ ಆಯುಕ್ತರಾದ ಶಮ್ಲಾ ಇಕ್ಬಾಲ್ ಸ್ಪಷ್ಟಪಡಿಸಿದ್ದಾರೆ.
ನಿಗದಿತ ಮಾನದಂಡಗಳಿಗೆ ವಿರುದ್ಧವಾಗಿ ಎಎವೈ ಅಥವಾ ಬಿಪಿಎಲ್ ಪಡಿತರ ಚೀಟಿ ಪಡೆದಿದ್ದಲ್ಲಿ ಅನರ್ಹವೆಂದು ಗುರುತಿಸಲಾಗುತ್ತಿದ್ದು, ಅಂತಹ ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಸೂಚಿಸಲಾಗಿದೆ. ಅಲ್ಲದೆ, ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಿ ಎಪಿಎಲ್ ( ಆದ್ಯತೇತರ ) ಪಡಿತರ ಚೀಟಿಗಳಾಗಿ ಪರಿವರ್ತಿಸಲಾಗುತ್ತಿದೆ ಎಂದಿದ್ದಾರೆ.
ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ವಾಣಿಜ್ಯ ವಾಹನಗಳಾದ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬï, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ ವಾರ್ಷಿಕ ಆದಾಯ 1.20 ಲಕ್ಷ ರೂ.ಗಿಂತ ಹೆಚ್ಚು ಇರುವ ಕುಟುಂಬಗಳು ಈ ಮಾನದಂಡಗಳಿಗೆ ವಿರುದ್ಧವಾಗಿ ಯಾವುದೇ ಕುಟುಂಬಗಳು ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲï) ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಕೋರಿದೆ.