Select Your Language

Notifications

webdunia
webdunia
webdunia
webdunia

ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ ಬಿಎಂಟಿಸಿ

ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ ಬಿಎಂಟಿಸಿ
ಬೆಂಗಳೂರು , ಶನಿವಾರ, 10 ಜೂನ್ 2023 (09:29 IST)
ಬೆಂಗಳೂರು : ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗಳುಜೂನ್ 12 ರಿಂದ ಆರಂಭಗೊಳ್ಳಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಉಚಿತವಾಗಿ ಪ್ರಯಾಣಿಸಿದ ಬೆನ್ನೇಲೆ ಬಿಎಂಟಿಸಿ ಕೂಡ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಿಸಿದೆ.
 
ಹಾಲ್ ಟಿಕೆಟ್ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಬಿಎಂಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಅವಕಾಶವನ್ನು ಕಲ್ಪಿಸಿದೆ. ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಜೂನ್ 12ರಿಂದ ಜೂನ್ 19ರವರೆಗೆ ನಡೆಯುತ್ತಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಗ ತೆರಿಗೆದಾರನಾಗಿದ್ದರೆ ತಾಯಿಗೆ 2 ಸಾವಿರ ಸಿಗಲ್ಲ