ಹುಬ್ಬಳ್ಳಿ : ಹಾನಗಲ್ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಸುಳಿವು ನೀಡಿದ್ದಾರೆ. ತೈಲ ಬೆಲೆ ಆರ್ಥಿಕತೆ ಮೇಲೆ ನೇರ ಪರಿಣಾಮ ಬೀರುತ್ತದೆ. ರಾಜ್ಯದ ಆರ್ಥಿಕತೆ ಸುಧಾರಣೆಯಾದರೆ ಉಪಚುನಾವಣೆ ಬಳಿಕ ಬೆಲೆ ಇಳಿಕೆ ಮಾಡುವ ಬಗ್ಗೆ ಚಿಂತನೆಯಿದೆ ಅಂತ ತಿಳಿಸಿದ್ದಾರೆ.