Select Your Language

Notifications

webdunia
webdunia
webdunia
webdunia

ಡಿಜಿಟಲ್ ಓದುಗರಿಗೆ ಭಾರಿ ಭರವಸೆ ಕೊಟ್ಟ ಮುಖ್ಯಮಂತ್ರಿ ಬೊಮ್ಮಾಯಿ!

ಡಿಜಿಟಲ್ ಓದುಗರಿಗೆ ಭಾರಿ ಭರವಸೆ ಕೊಟ್ಟ ಮುಖ್ಯಮಂತ್ರಿ ಬೊಮ್ಮಾಯಿ!
ಬೆಂಗಳೂರು , ಭಾನುವಾರ, 26 ಸೆಪ್ಟಂಬರ್ 2021 (14:46 IST)
ಬೆಂಗಳೂರು, ಸೆ. 26 : ಬೆಳಗಾವಿಯ ಇ-ಗ್ರಂಥಾಲಯ ಕಾರ್ಯವೈಖರಿಯನ್ನು ಗಮನಿಸುತ್ತೇವೆ. ಅದು ಯಶಸ್ವಿಯಾದಲ್ಲಿ, ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಇ ಲೈಬ್ರರಿ ತೆರೆಯಲು ಸರ್ಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Photo Courtesy: Google

ಬೆಳಗಾವಿಯಲ್ಲಿ ರವೀಂದ್ರ ಕೌಶಿಕ್ ಹೆಸರಿನಲ್ಲಿ ಇ-ಗ್ರಂಥಾಲಯವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಬೊಮ್ಮಾಯಿ ಮಾತನಾಡಿದ್ದಾರೆ.
ಡಿಜಿಟಲ್ ಗ್ರಂಥಾಲಯ ಓದುಗರಿಗೆ, ಬರಹಗಾರರಿಗೆ, ಜ್ಞಾನಪಡೆಯಲು ಬಯಸುವವರಿಗೆ ಜ್ಞಾನದ ರಹದಾರಿಯನ್ನು ತೆರೆದಿದೆ. ಇದರಿಂದ ಡಿಜಿಟಲ್ ಶಕ್ತಿಯನ್ನು ಮನೆ ಮನೆಗೆ ತಲುಪಿಸುವ ಕೆಲಸವಾಗುತ್ತದೆ. ಜ್ಞಾನ ನೀಡುವುದು ಮತ್ತು ಪಡೆಯುವುದು ಅತ್ಯಗತ್ಯ. ಜ್ಞಾನ ಮತ್ತು ಧ್ಯಾನ ಇವೆರಡು ಬದುಕಿಗೆ ಸಾರ್ಥಕತೆ ಕೊಡುವ, ಅರ್ಥವನ್ನು ಕೊಡುವ, ಪರೋಪಕಾರ ಮಾಡುವ ಗುಣವನ್ನು ಕೊಡುವ ಪ್ರಮುಖ ಮಾರ್ಗವಾಗಿದೆ. ಜ್ಞಾನ ಮತ್ತು ಧ್ಯಾನಗಳನ್ನು ಪಡೆದು ಅದನ್ನು ಸಮಾಜಕ್ಕೆ ಹಂಚಬೇಕು ಎಂಬ ಕೆಲಸವನ್ನು ಗ್ರಂಥಾಲಯ ಮಾಡುತ್ತದೆ ಎಂದು ಸಿಎಂ ಬದವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ವಿವರಿಸಿದರು.
ಜೊತೆಗೆ ಬೆಳಗಾವಿ ಜನರ ಕನ್ನಡಾಭಿಮಾನದ ಬಗ್ಗೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷವಾಗಿ ಮಾತನಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

3 ದಿನಗಳ ಅಮೆರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್ಸಾದ ಮೋದಿ