Publish Date: Fri, 04 Mar 2022 (12:38 IST)
Updated Date: Fri, 04 Mar 2022 (12:59 IST)
ಬೆಂಗಳೂರು : ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಶ್ರೀಕಂಠೇಶ್ವರ ದೇವಸ್ಥಾನ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ ಅವರು ಸಮಸ್ತ ಕರ್ನಾಟಕದ ಜನತೆಯ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.
ಬೆಂಗಳೂರಿನ ಆರ್ ಟಿ ನಗರ ನಿವಾಸದ ಬಳಿ ಇರುವ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪೌರ ಕಾರ್ಮಿಕರ ಜೊತೆ ಮಾತನಾಡಿ, ಅವರ ಕುಶಲ ಕ್ಷೇಮ ವಿಚಾರಿಸಿದರು.
ಇಂದು ಮಧ್ಯಾಹ್ನ 12.30ಕ್ಕೆ ಸಿಎಂ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹತ್ತು ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ.