Publish Date: Tue, 29 Nov 2022 (13:25 IST)
Updated Date: Tue, 29 Nov 2022 (14:27 IST)
ಬೆಳಗಾವಿ : ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ಗಳ ಮೇಲೆ ಕಲ್ಲು ತೂರಾಟ ಮಸಿ ಬಳಿದ ಪ್ರಕರಣ ಸೇರಿದಂತೆ ನಾಳೆ ಸುಪ್ರೀಂ ಕೋರ್ಟ್ನಲ್ಲಿ ಗಡಿ ವಿವಾದ ವಿಚಾರಣೆ.
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಭಾಗದ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಹೈವೋಲ್ಟೆಜ್ ಮೀಟಿಂಗ್ ನಡೆಯುತ್ತಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ಕುಮಾರ್ ನೇತೃತ್ವದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಭಾಗದ ಹಿರಿಯ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ ಜರುಗುತ್ತಿದೆ.
ಸಭೆಯಲ್ಲಿ ಪ್ರಮುಖವಾಗಿ ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್ಗಳ ಮೇಲೆ ಕಲ್ಲು ತೂರಾಟ ಮಸಿ ಬಳಿದ ಪ್ರಕರಣ ಸೇರಿದಂತೆ ನ.30ರಂದು ಗಡಿ ವಿವಾದದ ಅಂತಿಮ ವಿಚಾರಣೆ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ.