Webdunia - Bharat's app for daily news and videos

Install App

ಭಾರತ್ ಬಂದ್ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ; ಸಿಎಂ ಮನೆಗೆ ಬಿಗಿ ಭದ್ರತೆ!

Webdunia
ಸೋಮವಾರ, 27 ಸೆಪ್ಟಂಬರ್ 2021 (11:20 IST)
ಬೆಂಗಳೂರು (ಸೆಪ್ಟೆಂಬರ್ 27):  ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಯ ವಿರುದ್ಧ ರೈತರು ಸತತ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದಾರೆ.

ಆದರೆ, ರೈತರ ಹೋರಾಟದ ಬಗ್ಗೆ ಕೇಂದ್ರ ಸರ್ಕಾರ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಲದೆ, ರೈತರ ಬೇಡಿಕೆಗೂ ಮಣಿಯವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಪರಿಣಾಮ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್. 27 ರಂದು ಭಾರತ್ ಬಂದ್ಗೆ ಕರೆ ನೀಡಿದೆ. ಈ ಬಂದ್ಗೆ ಕರ್ನಾಟಕದಲ್ಲೂ ಸಹ ಅನೇಕ ರೈತ ಸಂಘಟನೆಗಳು ಬೆಂಬಲ ಸೂಚಿಸಿತ್ತು. ಅಲ್ಲದೆ, ಇಂದು ಕೃಷಿ ಕಾಯ್ದೆ ಮತ್ತು ಬೆಲೆ ಏರಿಕೆಯನ್ನು ಖಂಡಿಸಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಂದ್ ನಡೆಸಲಾಗುತ್ತಿದೆ. ಹೀಗಾಗಿ ಪೊಲೀಸರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸ, ಸರ್ಕಾರಿ ನಿವಾಸ, ಗೃಹ ಕಚೇರಿ ಕೃಷ್ಣಾ ಸೇರಿದಂತೆ ಅನೇಕ ಕಡೆಗಳಲ್ಲಿ ಬಿಗಿ ಭದ್ರತೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ಮತ್ತು ಬೆಲೆ ಏರಿಕೆಯನ್ನು ಖಂಡಿಸಿ ಅಪಾರ ಸಂಖ್ಯೆಯ ಜನ ಬೆಂಗಳೂರಿನಲ್ಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ಕೃಷಿ ಕಾಯ್ದೆಯನ್ನು ವಿರೋಧಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ರೈತ ಹೋರಾಟಗಾರರು ಇಂದು ಸಿಎಂ ಮನೆಗೂ ಮುತ್ತಿಗೆ ಹಾಕುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಪೊಲೀಸರು ಮುಖ್ಯಮಂತ್ರಿಗಳ ನಿವಾಸಕ್ಕೆ ಬಿಗಿ ಭದ್ರತೆ ನೀಡಿದ್ದಾರೆ. ಹೆಚ್ಚು ಜನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಸಿಎಂ ಮನೆ ಭದ್ರತೆ ಪರಿಶೀಲಿಸಿದ ಡಿಸಿಪಿ ಅನುಚೇತ್, ಕುಮಾರಕೃಪಾ ರಸ್ತೆಯಲ್ಲಿ ರುವ ಸಿಎಂ ಸರ್ಕಾರಿ ನಿವಾಸವಿದ್ದು, ಅವರ ಮನೆ ಸೇರಿದಂತೆ ಸರ್ಕಾರಿ ನಿವಾಸ, ಗೃಹ ಕಚೇರಿ ಕೃಷ್ಣಾ, ಖಾಸಗಿ ನಿವಾಸಕ್ಕೆ ಬಿಗಿ ಭದ್ರತೆ ನೀಡಲು ಸೂಚನೆ ನೀಡಿದ್ದಾರೆ. ಹೆಚ್ಚು ಬ್ಯಾರಿಕೇಡ್ ಗಳನ್ನು ಹಾಕಿ ಭದ್ರತೆ ನೀಡಲಾಗಿದೆ. ಅಲ್ಲದೆ, ಆರ್ಟಿ ನಗರದಲ್ಲಿರುವ ಸಿಎಂ ಖಾಸಗಿ ನಿವಾಸಕ್ಕೂ ಭದ್ರತೆ ನೀಡಲಾಗಿದೆ.
ಬಂದ್ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ;
ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ಮತ್ತು ಸತತ ಬೆಲೆ ಏರಿಕೆ ವಿರುದ್ಧ ರೈತ ಸಂಘಟನೆಗಳು ಇಂದು ದೇಶದಾದ್ಯಂತ ಭಾರತ್ ಬಂದ್ ಘೋಷಿಸಿದೆ. ಕರ್ನಾಟಕದಲ್ಲೂ ಅನೇಕ ರೈತ ಸಂಘಟನೆಗಳು ಈ ಬಂದ್ಗೆ ಬೆಂಬಲ ಸೂಚಿಸಿದ್ದವು. ಹೀಗಾಗಿ ಇಂದು ಬೆಂಗಳೂರಿನಲ್ಲಿ ಬಂದ್ ಯಶಸ್ವಿಯಾಗಲಿದೆ. ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಸ್ತಬ್ಧವಾಗಲಿದೆ ಎನ್ನಲಾಗಿತ್ತು.
ಆದರೆ, ಇಂದು ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್ ಸೇರಿದಂತೆ ಅನೇಕ ಕಡೆಗಳಲ್ಲಿ ಬಸ್ ಸಂಚಾರ ಮುಕ್ತವಾಗಿತ್ತು. ಆಟೋ ಸೇರಿದಂತೆ ಎಲ್ಲಾ ಸಾರಿಗೆ ಸಂಚಾರವೂ ಯಾವುದೇ ಅಡ್ಡಿ-ಆತಂಕ ಇಲ್ಲದೆ ನಡೆಯುತ್ತಿದೆ. ಜನ ಜೀವನವೂ ಎಂದಿನಂತೆ ಮಾಮೂಲಿ ಯಾಗಿದ್ದು, ಭಾರತ್ ಬಂದ್ಗೆ ನೀರಸ ಪ್ರತಿಕ್ರಿಯೆ ಕಂಡುಬಂದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments