Publish Date: Tue, 22 May 2018 (10:04 IST)
Updated Date: Tue, 22 May 2018 (10:08 IST)
ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಯಡಿಯೂರಪ್ಪ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ವಿಜಯಪುರದ ಕೆಲವೆಡೆ ವಿವಿ ಪ್ಯಾಟ್ ಗಳು ಪತ್ತೆಯಾದ ಪ್ರಕರಣದ ಹಿನ್ನಲೆಯಲ್ಲಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಯಡಿಯೂರಪ್ಪ ಚುನಾವಣೆ ಸಂದರ್ಭದಲ್ಲೇ ಇಂತಹ ಹಲವು ಅಕ್ರಮಗಳು ಗಮನಕ್ಕೆ ಬಂದಿದ್ದು, ಈ ಬಗ್ಗೆ ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಯಡಿಯೂರಪ್ಪ ದೂರಿದ್ದಾರೆ.
ವಿವಿ ಪ್ಯಾಟ್ ಪತ್ತೆ ಪ್ರಕರಣದ ಬಗ್ಗೆ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸುತ್ತದೆ ಎಂದು ನಂಬಿದ್ದೇನೆ ಎಂದು ಯಡಿಯೂರಪ್ಪ ಪತ್ರದಲ್ಲಿ ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.