Publish Date: Tue, 29 May 2018 (08:55 IST)
Updated Date: Tue, 29 May 2018 (08:56 IST)
ಬೆಂಗಳೂರು: ಪ್ರಧಾನಿ ಮೋದಿ ಅವಿರತರ ಪ್ರಯತ್ನದಿಂದ 2020 ರ ವೇಳೆಗೆ ನವಭಾರತ ನಿರ್ಮಾಣ ಪಕ್ಕಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನಮ್ಮ ಪ್ರಧಾನಿ ಮೋದಿ ಹಗಲಿರುಳೆನ್ನದೇ ದೇಶಕ್ಕಾಗಿ ದುಡಿಯುತ್ತಿದ್ದಾರೆ. ಅವರ ಸತತ ಪರಿಶ್ರಮದಿಂದ ನವಭಾರತ ನಿರ್ಮಾಣ ಶತಸಿದ್ಧ’ ಎಂದು ಅವರು ಹೇಳಿಕೊಂಡಿದ್ದಾರೆ.
ಇನ್ನೊಂದೆಡೆ ಸಿಎಂ ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ ಅವರು ರೈತರ ಸಮಸ್ಯೆಗೆ ಪರಿಹಾರ ಕೊಡುವಂತೆ ನಾವು ಪ್ರತಿಭಟನೆ ಮಾಡಿದರೆ ನಮ್ಮ ಜತೆಗೆ ಜನ ಸಾಮಾನ್ಯರನ್ನೂ ಬಂಧಿಸುವುದಕ್ಕೆ ಮುಖ್ಯಮಂತ್ರಿಗಳು ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ದೂರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.