Publish Date: Wed, 16 May 2018 (09:07 IST)
Updated Date: Wed, 16 May 2018 (09:08 IST)
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಪಡೆಯಲು ವಿಫಲವಾದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಡರಾತ್ರಿ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.
ಇಂದು ಬೆಳಿಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿರುವುದಾಗಿ ತಿಳಿಸಿರುವ ಯಡಿಯೂರಪ್ಪ, ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಮೊದಲು ಸರ್ಕಾರ ರಚಿಸಲು ಅವಕಾಶ ನೀಡಬೇಕು ಎಂದಿದ್ದಾರೆ.
ಅತೀ ದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಮೊದಲು ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಹಿಂದೆ ಎರಡು ರಾಜ್ಯಗಳಲ್ಲಿ ಇಂತಹ ಪರಿಸ್ಥಿತಿ ಇತ್ತು. ಈಗ ರಾಜ್ಯದಲ್ಲೂ ಬಹುದೊಡ್ಡ ಪಕ್ಷವಾಗಿರುವ ಬಿಜೆಪಿಗೆ ರಾಜ್ಯಪಾಲರು ಮೊದಲ ಆದ್ಯತೆ ನೀಡಬೇಕು ಎಂದು ಯಡಿಯೂರಪ್ಪ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.