ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ ಬಜೆಟ್ನಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಮಾಡುವುದಾಗಿ ಘೊಷಣೆ ಮಾಡಿದರು.
ಹೌದು. ಈ ಬಾರಿಯ ಕೇಂದ್ರ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೂ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಮಹಾಮಾರಿ ಕೊರೊನಾ ನಂತರ ಶಿಕ್ಷಣ ಕ್ಷೇತ್ರ ಚೇತರಿಸಿಕೊಳ್ಳಲು ಬೇಕಾದ ಕೆಲವು ಅಗತ್ಯ ಅಂಶಗಳನ್ನು ಈ ಬಾರಿ ಬಜೆಟ್ನಲ್ಲಿ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ 2014 ರಿಂದ ಸ್ಥಾಪಿತವಾಗಿರುವ ಅಸ್ತಿತ್ವದಲ್ಲಿರುವ 157 ವೈದ್ಯಕೀಯ ಕಾಲೇಜುಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದರು.