ಬೆಂಗಳೂರು : 2023-24ರ ರಾಜ್ಯ ಬಜೆಟ್ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದ್ದು, ಸರ್ಕಾರ ಉಚಿತ ಬಸ್ ಪಾಸ್ ಘೋಷಣೆ ಮಾಡಲಾಗಿದೆ.
ವಿದ್ಯಾವಾಹಿನಿ ಯೋಜನೆಯಡಿ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಲಾಗುವುದು. ಇದರಿಂದ ರಾಜ್ಯದ 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿದೆ.
ಜೊತೆಗೆ ಶಾಲಾ-ಕಾಲೇಜುಗಳ ಮಕ್ಕಳ ಬಸ್ಸು ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಬಸ್ ಯೋಜನೆ ಪ್ರಾರಂಭಕ್ಕೆ ನಿರ್ಧಾರ ಮಾಡಲಾಗುತ್ತಿದೆ.