Select Your Language

Notifications

webdunia
webdunia
webdunia
webdunia

ವರ್ಷಾಂತ್ಯಕ್ಕೆ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ

ವರ್ಷಾಂತ್ಯಕ್ಕೆ ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ
ಬೆಂಗಳೂರು , ಬುಧವಾರ, 24 ಮೇ 2023 (10:06 IST)
ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಬಿಎಂಆರ್ಸಿಎಲ್ ಮುಂದಾಗಿದೆ. ನಮ್ಮ ಮೆಟ್ರೋವಿನ ಹಳದಿ ಮಾರ್ಗ ಈ ವರ್ಷಾಂತ್ಯಕ್ಕೆ ಕಾರ್ಯಾಚರಣೆಗೊಳ್ಳಲಿದೆ.
 
ಬಹು ನಿರೀಕ್ಷಿತ ಆರ್ವಿ ರಸ್ತೆಯಿಂದ ಬೊಮ್ಮಸಂದ್ರ ಮೆಟ್ರೋ ಮಾರ್ಗವನ್ನು ಈ ವರ್ಷದ ಅಂತ್ಯಕ್ಕೆ ಆರಂಭಿಸಲು ಬಿಎಂಆರ್ಸಿಎಲ್ ಸಜ್ಜಾಗಿದೆ. ಪ್ರಸಕ್ತ ವರ್ಷಾಂತ್ಯಕ್ಕೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮವು ತಿಳಿಸಿದೆ.

ಬಿಎಂಆರ್ಸಿಎಲ್ ಈ ಮೊದಲು ಎರಡು ಹಂತಗಳಲ್ಲಿ ಮೆಟ್ರೋ ರೈಲು ಕಾರ್ಯಾಚರಣೆ ಆರಂಭಿಸಲು ನಿರ್ಧರಿಸಿತ್ತು. ಮೊದಲ ಹಂತದಲ್ಲಿ ಜೂನ್ ತಿಂಗಳಲ್ಲಿ ಬೊಮ್ಮಸಂದ್ರದಿಂದ ಸಿಲ್ಕ್ಬೋರ್ಡ್ವರೆಗೆ ಮತ್ತು ಎರಡನೇ ಹಂತದಲ್ಲಿ ಡಿಸೆಂಬರ್ನಲ್ಲಿ ಸೆಂಟ್ರಲ್ ಸಿಲ್ಕ್ಬೋರ್ಡ್ನಿಂದ ಆರ್ವಿ ರಸ್ತೆವರೆಗೆ ರೈಲುಗಳ ಸಂಚಾರಕ್ಕೆ ಉದ್ದೆಶಿಸಿತ್ತು. ಈ ಕ್ರಮದಿಂದ ಪ್ರಯಾಣಿಕರನ್ನು ಆಕರ್ಷಿಸುವುದು ಕಷ್ಟವೆಂದು ಅರಿತು ಒಂದೇ ಹಂತದಲ್ಲಿ ಪೂರ್ಣಗೊಳಿಸಲು ನಿರ್ಧರಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಮಹಾಮಳೆಗೆ ಮತ್ತೊಂದು ಬಲಿ..!