ಬೆಂಗಳೂರು : ಕೇಂದ್ರ ಸರ್ಕಾರ ಸಿದ್ಧಪಡಿಸಿದ ಹೊಸ ಶಿಕ್ಷಣ ನೀತಿಯನ್ನು ರದ್ದುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ.
ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಮತ್ತು ನಿಟ್ಟಿನಲ್ಲಿ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು ಎಂದು ಹೇಳಿದರು.