Select Your Language

Notifications

webdunia
webdunia
webdunia
webdunia

ಭಾರತದಲ್ಲಿ ಪ್ರಕರಣಗಳು ಮತ್ತಷ್ಟು ಇಳಿಕೆ

ಭಾರತದಲ್ಲಿ ಪ್ರಕರಣಗಳು ಮತ್ತಷ್ಟು ಇಳಿಕೆ
ನವದೆಹಲಿ , ಶುಕ್ರವಾರ, 18 ಫೆಬ್ರವರಿ 2022 (09:33 IST)
ಭಾರತದಲ್ಲಿ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 25,920 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರಕ್ಕಿಂತ ಇಂದು (ಫೆ.18) 4,837 ಕಡಿಮೆ ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆಯಲ್ಲೂ ಇಳಿಕೆಯಾಗಿದೆ. ಇಂದು 492 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. 66,254 ಜನರು ಒಂದು ದಿನದ ಅವಧಿಯಲ್ಲಿ ಚೇತರಿಸಿಕೊಂಡಿದ್ದಾರೆ. ಈ ಮೂಲಕ ಚೇತರಿಕೆ ಪ್ರಮಾಣ ಶೇ.98.12ರಷ್ಟಿದೆ.

ಪ್ರಸ್ತುತ ದೇಶದಲ್ಲಿ 2,92,092 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಪಾಸಿಟಿವಿಟಿ ದರ 2.07% ಇದೆ. ದೇಶದಲ್ಲಿ ಇದುವರೆಗೆ ಒಟ್ಟು 4,27,80,235 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 5,10,905 ಜನರು ಸೋಂಕಿನಿಂದ ನಿಧನ ಹೊಂದಿದ್ದಾರೆ. ಲಸಿಕಾ ಅಭಿಯಾನದ ಅಡಿಯಲ್ಲಿ 174.64 ಕೋಟಿ ಡೋಸ್ ಲಸಿಕೆಯನ್ನು ಈವರೆಗೆ  ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊಲೆ ಮಾಡಿ ರುಂಡ ತೆಗೆದುಕೊಂಡು ಹೋದ ದರೋಡೆಕೋರರು!