Select Your Language

Notifications

webdunia
webdunia
webdunia
webdunia

ಕರ್ನಾಟಕ ಸೇರಿದಂತೆ ದೇಶಾದ್ಯಂತ 56 ಸ್ಥಳಗಳಲ್ಲಿ ಸಿಬಿಐ ದಾಳಿ

ಕರ್ನಾಟಕ ಸೇರಿದಂತೆ ದೇಶಾದ್ಯಂತ 56 ಸ್ಥಳಗಳಲ್ಲಿ ಸಿಬಿಐ ದಾಳಿ
ನವದೆಹಲಿ , ಭಾನುವಾರ, 25 ಸೆಪ್ಟಂಬರ್ 2022 (07:16 IST)
ನವದೆಹಲಿ : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ಚಿತ್ರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬಿಐ ‘ಮೇಘ ಚಕ್ರ’ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಶನಿವಾರ ಸಿಬಿಐ ದೇಶಾದ್ಯಂತ ಕರ್ನಾಟಕ ಸೇರಿದಂತೆ 19 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 56 ಸ್ಥಳಗಳಲ್ಲಿ ಶೋಧ ನಡೆಸಿದೆ.

ಕರ್ನಾಟಕದ ರಾಮನಗರ, ಕೋಲಾರದಲ್ಲಿ ಈ ದಾಳಿ ನಡೆದಿದೆ. ಇಂಟರ್ಪೋಲ್ ಸಿಂಗಾಪುರ ಮತ್ತು ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧಾರದಲ್ಲಿ ಈ ದಾಳಿ ನಡೆಸಲಾಗಿದೆ.

ಕಳೆದ ವರ್ಷ ‘ಆಪರೇಷನ್ ಕಾರ್ಬನ್’ ಹೆಸರಿನಲ್ಲಿ ವಿಶ್ವಾದ್ಯಂತ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕಾರ್ಯಾಚರಣೆ ನಡೆಸಲಾಗಿತ್ತು. ಈ ಕಾರ್ಯಾಚರಣೆ ವೇಳೆ ಹಲವು ಮಾಹಿತಿಗಳ ಸಿಕ್ಕಿದ ಆಧಾರದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.

ಅಪ್ರಾಪ್ತರ ಲೈಂಗಿಕ ಚಟುವಟಿಕೆಗಳ ಆಡಿಯೋ ಹಾಗೂ ವೀಡಿಯೋಗಳನ್ನು ಪ್ರಸಾರ ಮಾಡಲು ಪೆಡ್ಲರ್ಗಳು ಕ್ಲೌಡ್ ಸ್ಟೋರೇಜ್ ಅನ್ನು ಬಳಸಿಕೊಂಡಿದ್ದಾರೆ. ಹೀಗಾಗಿ ಇದರ ವಿರುದ್ಧದ ಕಾರ್ಯಾಚರಣೆಗೆ ‘ಮೇಘ ಚಕ್ರ’ ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕ್ಷಿಪ್ರ ಕಾಂತ್ರಿ : ಗೃಹ ಬಂಧನದಲ್ಲಿ ಅಧ್ಯಕ್ಷ ಕ್ಸಿ ಜಿನ್ಪಿಂಗ್?