Select Your Language

Notifications

webdunia
webdunia
webdunia
webdunia

ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಕೇಂದ್ರ ಸಲಹೆ

ಮಾಸ್ಕ್
ನವದೆಹಲಿ : ಕೊರೋನಾ ಇನ್ನೂ ಮುಗಿದಿಲ್ಲ, ಇದರಿಂದಾಗಿ ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಕೇಂದ್ರವು ಇಂದು ಸಲಹೆ ನೀಡಿದೆ.

ವಿಶ್ವಕ್ಕೆ ಕೊರೊನಾ ಹಬ್ಬಿಸಿದ ಚೀನಾದಲ್ಲಿ ಈಗ ಮತ್ತೆ ಕೊರೊನಾ ರಣತಾಂಡವ ಆಡುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ದೇಶದ ಕೋವಿಡ್ ಪರಿಸ್ಥಿತಿಯ ಕುರಿತು ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಸಭೆ ನಡೆಸಿದರು. ಸಭೆಯ ಬಳಿಕ ಕೇಂದ್ರ ಆರೋಗ್ಯ ಸಚಿವ ಟ್ವೀಟ್ ಮಾಡಿದ್ದಾರೆ.

ಕೊರೋನಾ ಇನ್ನೂ ಮುಗಿದಿಲ್ಲ. ಆಯಾ ರಾಜ್ಯಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಎಲ್ಲರಿಗೂ ಎಚ್ಚರಿಕೆಯನ್ನು ನೀಡುವಂತೆ ಸೂಚಿಸುತ್ತೇನೆ. ಕೊರೊನಾ ಪರಿಸ್ಥಿತಿಯನ್ನು ನಿಭಾಯಿಸಲು ಸಜ್ಜಾಗಿರಬೇಕು ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ! ಶಾಲೆಯ ಪ್ರಾಂಶುಪಾಲ ಬಂಧನ