ನವದೆಹಲಿ : 2022-23ನೇ ಸಾಲಿನ ಕೇಂದ್ರ ಬಜೆಟ್‍ಗೆ ಕ್ಷಣಗಣನೆ ಶುರುವಾಗಿದೆ.
ಇಂದು ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 4ನೇ ಬಜೆಟ್ ಮಂಡಿಸಲಿದ್ದಾರೆ.
ನಿರ್ಮಲಾ ಬಜೆಟ್ ಮೇಲೆ ನಿರೀಕ್ಷೆಗಳ ಮಹಾಪೂರವೇ ಇದ್ದು, ಕಳೆದೆರಡು ವರ್ಷಗಳಿಂದ ಕೋವಿಡ್‍ನಿಂದ ತತ್ತರಿಸಿರುವ ಆರ್ಥಿಕತೆಗೆ ಬೂಸ್ಟರ್ ಡೋಸ್ ಸಿಗಬಹುದು ಎನ್ನಲಾಗಿದೆ.
ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಬಜೆಟ್ ಮಂಡನೆಯಾಗಲಿದ್ದು, ಈ ಬಾರಿಯೂ ಪೇಪರ್ ಲೆಸ್ ಬಜೆಟ್ ಮಂಡನೆಯಾಗಲಿದೆ.