Select Your Language

Notifications

webdunia
webdunia
webdunia
webdunia

ನಾಳೆ ಸಂಜೆ 4ಕ್ಕೆ ಸಿಇಟಿ ಫಲಿತಾಂಶ ಪ್ರಕಟ

ನಾಳೆ ಸಂಜೆ 4ಕ್ಕೆ ಸಿಇಟಿ ಫಲಿತಾಂಶ ಪ್ರಕಟ
ಬೆಂಗಳೂರು , ಭಾನುವಾರ, 19 ಸೆಪ್ಟಂಬರ್ 2021 (13:08 IST)
ಬೆಂಗಳೂರು : ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಅಗಸ್ಟ್ 28, 29 ಮತ್ತು 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (karnataka common entrance test KCET) ಫಲಿತಾಂಶ ನಾಳೆ (ಸೋಮವಾರ) ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು; ದಾಖಲೆಯ ಕಡಿಮೆ ಕಾಲಾವಧಿಯಲ್ಲೇ ಫಲಿತಾಂಶ ಪ್ರಕಟವಾಗುತ್ತದೆ. ಇದಕ್ಕಾಗಿ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಫಲಿತಾಂಶವು ನಾಳೆ ಸಂಜೆ 4 ಗಂಟೆ ನಂತರ https://cetonline.karnataka.gov.in/kea/ ಈ ಲಿಂಕ್ ನಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಈ ಲಿಂಕ್ ಕ್ಲಿಕ್ ಮಾಡೋ ಮೂಲಕ, ತಮ್ಮ ನೋಂದಣಿ ಸಂಖ್ಯೆ ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

'ಪರಿಶಿಷ್ಠ ಸಮುದಾಯ'ದ ಜನರಿಗೆ ಭರ್ಜರಿ ಗುಡ್ ನ್ಯೂಸ್