Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ನವದಿಲ್ಲಿ , ಮಂಗಳವಾರ, 29 ಮೇ 2018 (07:32 IST)
ನವದಿಲ್ಲಿ : ರಾಜ್ಯದ ನೂತನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ನವದಿಲ್ಲಿಗೆ ಆಗಮಿಸಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಕೇಂದ್ರ ಸರ್ಕಾರದ ಬೆಂಬಲ ನೀಡಬೇಕೆಂದು ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.


ಪ್ರಧಾನಿ ಮೋದಿಯವರನ್ನು ಭೇಟಿಯಾದ ಬಳಿಕ ಕರ್ನಾಟಕದ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು,’ ಮಹದಾಯಿ ವಿವಾದ ಸಂಬಂಧ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲು ಹಾಗೂ ರಾಜ್ಯದ ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ವಿದ್ಯುತ್ ಉತ್ಪಾದಿಸಲು ಕಲ್ಲಿದ್ದಿಲಿನ ಅಗತ್ಯವಿದೆ. ಹೀಗಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯಕ್ಕೆ ತಕ್ಕ ಕಲ್ಲಿದ್ದಲು ಪೂರೈಸುವಂತೆ ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾಗಿ ತಿಳಿಸಿದ್ದರು.
ಹಾಗೇ ‘ಗುಜರಾತ್ ನಲ್ಲಿ ನರೇಂದ್ರ ಮೋದಿ ಸಹ ಸುದೀರ್ಘ ಕಾಲ ಮುಖ್ಯಮಂತ್ರಿಗಳಗಿದ್ದರು, ಅವರು ತಮ್ಮ ಅನುಭವದ ಆಧಾರದಲ್ಲಿ ಕೆಲ ಸಲಹೆ ನೀಡಿದ್ದಾರೆ. ನಾನು ಅವರಿಗೆ ಧನ್ಯವಾದ ಸಮರ್ಪಿಸುವೆ’ ಎಂದು  ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಬಿ.ಎಸ್. ಯಡಿಯೂರಪ್ಪ