Publish Date: Mon, 26 Dec 2022 (12:25 IST)
Updated Date: Mon, 26 Dec 2022 (12:26 IST)
ಬೆಂಗಳೂರು : ಚಿಲುಮೆ ಡೇಟಾ ಅಕ್ರಮ ಪ್ರಕರಣದಲ್ಲಿ ಆರೋಪಿಗಳಾಗಿರುವ ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಕ್ರಮವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದು, ಇಬ್ಬರಿಗೂ ಸ್ಥಳ ನಿಯೋಜನೆ ಮಾಡಿದೆ.
ಪ್ರಕರಣದಲ್ಲಿ ಐಎಎಸ್ ಅಧಿಕಾರಿಗಳಾದ ಶ್ರೀನಿವಾಸ್ ಮತ್ತು ರಂಗಪ್ಪ ಅವರ ಹೆಸರು ಕೇಳಿಬಂದಿತ್ತು. ಇಬ್ಬರ ವಿಚಾರಣೆಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದರು. ಆಗ ಸರ್ಕಾರ ಸೇವೆಯಿಂದ ಅಮಾನತು ಮಾಡಿತ್ತು.
ಬಳಿಕ ಸರ್ಕಾರದ ಕ್ರಮವನ್ನು ಇಬ್ಬರೂ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. ಇದೀಗ ನ್ಯಾಯಾಲಯ ಇಬ್ಬರಿಗೂ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇಬ್ಬರನ್ನು ಸೇವೆಗೆ ಹೊಸ ಸ್ಥಾನಗಳಿಗೆ ನಿಯೋಜನೆ ಮಾಡಿದೆ.