Publish Date: Sat, 03 Dec 2022 (14:49 IST)
Updated Date: Sat, 03 Dec 2022 (14:51 IST)
ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲದಿನಗಳಿಂದ ಚಿರತೆ ಆತಂಕ ಮನೆ ಮಾಡಿದೆ. ಬೆಂಗಳೂರು ನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಚಿರತೆ ಕಂಡುಬಂದಿದ್ದು, ಕೆಲವರಿಗೆ ದಾಳಿ ನಡೆಸಿ ಬಲಿ ಪಡೆದಿದೆ.
ಇದೀಗ ಚಿರತೆ ದಾಳಿಯಲ್ಲಿ ಮೃತಪಟ್ಟವರಿಗೆ ಸಿಎಂ ಬಸವರಾಜ ಬೊಮ್ಮಾಯಿ 15 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಚಿರತೆ ದಾಳಿಯಿಂದಾಗಿ ಮೈಸೂರಿನಲ್ಲಿ ನಿನ್ನೆ ಎರಡನೇ ಬಲಿಯಾಗಿತ್ತು.
ಈ ಬೆನ್ನಲ್ಲೇ ಚಿರತೆ ಕುರಿತಾಗಿ ಗಂಭೀರವಾಗಿ ಪರಿಗಣಿಸಿರುವ ಸಿಎಂ ಇಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ಚಿರತೆ ಹಾವಳಿಯನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದೇವೆ.
ಚಿರತೆಯನ್ನು ಜೀವಂತ ಹಿಡಿದು ಅರಣ್ಯಕ್ಕೆ ಬಿಡುವಂತೆ ಸೂಚಿಸಿದ್ದೇವೆ. ಚಿರತೆ ದಾಳಿಯಿಂದ ಮೃತಪಟ್ಟವರಿಗೆ 15 ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ಹಿಂದೆ ಆನೆ ದಾಳಿಯಿಂದ ಮೃತಪಟ್ಟವರಿಗೆ ನೀಡುತ್ತಿದ್ದಂತೆ ಪರಿಹಾರ ಇದೀಗ ಚಿರತೆ ದಾಳಿಯಿಂದ ಮೃತಪಟ್ಟವರಿಗೂ ನೀಡುತ್ತಿದ್ದೇವೆ ಎಂದಿದ್ದಾರೆ.