ಬೆಂಗಳೂರು : ಮೊದಲನೇ ಹಾಗೂ 2 ನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ಸರಾಸರಿಯನ್ನು ತಲುಪಬೇಕು ಎಂದು ಎಲ್ಲ ಜಿಲ್ಲೆಗಳ ಡಿಸಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಕೋವಿಡ್-19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಬೊಮ್ಮಾಯಿ ಮಾತನಾಡಿದರು. ಜಿಲ್ಲಾಡಳಿತಗಳು ದಕ್ಷತೆಯಿಂದ ಪ್ರತಿ ಗ್ರಾಮದ ಕಟ್ಟಕಡೆಯ ಮನೆಗೂ ಔಷಧ ಕಿಟ್ಗಳನ್ನು ತಲುಪಿಸಬೇಕು.
ಹೋಮ್ ಐಸೋಲೇಶನ್ ನಲ್ಲಿರುವವರಿಗೆ ಸರಿಯಾದ ಚಿಕಿತ್ಸೆ ನೀಡಬೇಕು. ಜಿಲ್ಲಾಧಿಕಾರಿಗಳು, ಡಿಹೆಚ್ಒಗಳು ತಾಲ್ಲೂಕುಗಳಿಗೆ ಭೇಟಿ ನೀಡಿ ಔಷಧ ವಿತರಣೆಯ ಬಗ್ಗೆ ಪರಿಶೀಲಿಸಬೇಕು. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಮೇಲ್ವಿಚಾರಣೆ ಕೈಗೊಳ್ಳಬೇಕು ಎಂದು ತಿಳಿಸಿದರು.