Publish Date: Sat, 16 Jun 2018 (08:43 IST)
Updated Date: Sat, 16 Jun 2018 (08:45 IST)
ಬೆಂಗಳೂರು: ರೈತರ ಸಾಲಮನ್ನಾ ಕುರಿತು ಮಾಧ್ಯಮಗಳಲ್ಲಿ ದಿನಕ್ಕೊಂದು ವದಂತಿ ಬರುತ್ತಿರುವ ಹಿನ್ನಲೆಯಲ್ಲಿ ಸ್ವತಃ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಈ ಬಜೆಟ್ ನಲ್ಲಿ ಸಿಎಂ ಎಚ್ ಡಿಕೆ ಸಾಲಮನ್ನಾ ಮಾಡುವುದು ಅನುಮಾನ ಎಂಬಿತ್ಯಾದಿ ಸುದ್ದಿಗಳ ಹಿನ್ನಲೆಯಲ್ಲಿ ಅವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
‘ರೈತರೇ ಸಾಲಮನ್ನಾ ಬಗ್ಗೆ ಯಾವುದೇ ಅನುಮಾನ ಬೇಡ. ಸಾಲಮನ್ನಾ ವಿಚಾರಕ್ಕೆ ಈಗಲೂ ಸಂಪೂರ್ಣ ಬದ್ಧನಾಗಿದ್ದೇನೆ. ರೈತರಿಗೆ ಅನುಕೂಲವಾಗುವಂತಹ ಯೋಜನೆಯೊಂದನ್ನು ಸಿದ್ಧಪಡಿಸುತ್ತಿದ್ದೇನೆ. ಶೀಘ್ರದಲ್ಲೇ ಈ ಬಗ್ಗೆ ಘೋಷಣೆ ಮಾಡುತ್ತೇನೆ’ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.