Webdunia - Bharat's app for daily news and videos

Install App

ನಮಗೂ ತಿರುಗೇಟು ಕೊಡುವುದು ಗೊತ್ತು: ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 12 ಸೆಪ್ಟಂಬರ್ 2018 (09:26 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಕೆಲವು ಕಾಂಗ್ರೆಸ್ ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಲು ಯತ್ನಿಸುತ್ತಿರುವ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಜಾರಕಿಹೊಳಿ ಸಹೋದರರು ಸೇರಿದಂತೆ ಕಾಂಗ್ರೆಸ್ ನ ಕೆಲವು ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆಯಲು ಯತ್ನಿಸುತ್ತಿದೆ ಎಂಬ ಸುದ್ದಿಗಳ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಕುಮಾರಸ್ವಾಮಿ ನಮಗೂ ತಿರುಗೇಟು ಕೊಡಲು ಗೊತ್ತು. ಬಿಜೆಪಿಯ ಐವರು ಶಾಸಕರಿಂದ ರಾಜೀನಾಮೆ ಕೊಡಿಸಿದರೆ ಅವರ ಪರಿಸ್ಥಿತಿ ಏನಾಗುತ್ತದೆ ಗೊತ್ತಾ ಎಂದು ಕಿಡಿ ಕಾರಿದ್ದಾರೆ.

ಈ ನಡುವೆ ನಮ್ಮ ಶಾಸಕರು ಯಾರೂ ಬಿಜೆಪಿಗೆ ಹೋಗುತ್ತಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಅಷ್ಟೇ. ಸರ್ಕಾರ ಅತಂತ್ರವಾಗಿದೆ ಎಂದು ನಿಮಗೆ ಹೇಳಿದವರು ಯಾರು? ಎಂದು ಸಿಎಂ ಪ್ರಶ್ನಿಸಿದ್ದಾರೆ. ಅತ್ತ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿರುವ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷವೊಡ್ಡಿದ ಆರೋಪದಲ್ಲಿ ಎಸಿಬಿಗೆ ಕೇಸು ದಾಖಲಿಸಲು ಕಾಂಗ್ರೆಸ್-ಜೆಡಿಎಸ್ ಯೋಜನೆ ರೂಪಿಸಿದೆ. ಈ ಮೂಲಕ ಬಿಜೆಪಿಯ ಪ್ರಯತ್ನವನ್ನು ವಿಫಲಗೊಳಿಸಲು ಪ್ರತಿತಂತ್ರ ಹೂಡಿದೆ. ಅಂತೂ ಮತ್ತೆ ರಾಜ್ಯ ರೆಸಾರ್ಟ್ ರಾಜಕೀಯದತ್ತ ಹೊರಳುವ ಸೂಚನೆ ಕಂಡುಬರುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments