Publish Date: Thu, 24 May 2018 (10:32 IST)
Updated Date: Thu, 24 May 2018 (10:36 IST)
ಬೆಂಗಳೂರು: ರೈತರ ಸಾಲ ಸಂಪೂರ್ಣ ಮನ್ನಾ ಮಾಡುವ ಬಗ್ಗೆ ಸಿಎಂ ಕುಮಾರಸ್ವಾಮಿ ಪ್ರಮಾಣ ವಚನಕ್ಕೆ ಮೊದಲು ನೀಡಿದ್ದ ಹೇಳಿಕೆ ಗೊಂದಲ ಮೂಡಿಸಿದ್ದ ಬೆನ್ನಲ್ಲೇ ಇದೀಗ ಸ್ಪಷ್ಟನೆ ನೀಡಿದ್ದಾರೆ.
ಜೆಡಿಎಸ್ ಚುನಾವಣಾ ಪ್ರಣಾಳಿಕೆಯಲ್ಲಿ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ಸಮ್ಮಿಶ್ರ ಸರ್ಕಾರಕ್ಕೆ ಕುಮಾರಸ್ವಾಮಿ ಸಿಎಂ ಎಂಬ ನಿರ್ಧಾರವಾದ ಬಳಿಕ ಬಹುಮತ ಸಿಕ್ಕಿದ್ದರೆ ಸಂಪೂರ್ಣ ಸಾಲ ಮನ್ನಾ ಮಾಡುತ್ತಿದ್ದೆ ಎಂದು ಟೀಕೆಗೊಳಗಾಗಿದ್ದರು.
ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ, ಮಿತ್ರ ಪಕ್ಷ ಕಾಂಗ್ರೆಸ್ ನಾಯಕರ ಜತೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಈ ಬಗ್ಗೆ ಬಿಜೆಪಿಯವರು ಅನಗತ್ಯವಾಗಿ ನಮ್ಮನ್ನು ಟೀಕೆ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ. ನಾಳೆ ವಿಶ್ವಾಸ ಮತ ಯಾಚನೆ ನಡೆಯಲಿದ್ದು, ಅದಾದ ಬಳಿಕ ಸಿಎಂ ಕುಮಾರಸ್ವಾಮಿ ಸಂಪುಟ ರೈತರ ಸಾಲಮನ್ನಾ ವಿಚಾರದ ಬಗ್ಗೆ ಮೊದಲ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.