Publish Date: Fri, 01 Jun 2018 (12:16 IST)
Updated Date: Fri, 01 Jun 2018 (12:17 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಬಿಎಸ್ ವೈ ಏನು ನೈತಿಕತೆ ಇದೆ ಎಂದು ನಮ್ಮ ಬಗ್ಗೆ ಮಾತನಾಡುತ್ತಾರೆ? ಅವರ ಬಗ್ಗೆ ನಾನು ಮಾತನಾಡಲ್ಲ. ಜಮ್ಮು ಕಾಶ್ಮೀರದಲ್ಲಿ 2-3 ತಿಂಗಳ ಬಳಿಕ ಸಂಪುಟ ವಿಸ್ತರಣೆ ಮಾಡಲಾಗಿತ್ತು. ಇಲ್ಲೂ ಅದೇ ರೀತಿ ಸಮ್ಮಿಶ್ರ ಸರ್ಕಾರ ಇದೆ. ನಾವು ಎರಡು ಪಕ್ಷಗಳು ಕೂತು ಚರ್ಚಿಸಿ ಎಲ್ಲಾ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಹುಮತವಿದ್ದಿದ್ದರೆ ಏಕ ನಿರ್ಧಾರ ತೆಗೆದುಕೊಳ್ಳುತ್ತಿದ್ದೆವು. ಈಗ ಸಮ್ಮಿಶ್ರ ಸರ್ಕಾರವಾದ್ದರಿಂದ ಅದು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.