Publish Date: Sat, 26 May 2018 (12:29 IST)
Updated Date: Sat, 26 May 2018 (12:31 IST)
ಬೆಂಗಳೂರು: ರೈತರ ಸಂಪೂರ್ಣ ಸಾಲಮನ್ನಾ ಮಾಡಿದಿದ್ದರೆ ಸೋಮವಾರ ರಾಜ್ಯಾದ್ಯಂತ ಬಂದ್ ಗೆ ಕರೆ ಮಾಡುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಯಡಿಯೂರಪ್ಪ ವಿರುದ್ಧ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಜೆಪಿ ನಗರದ ತಮ್ಮ ನಿವಾಸದ ಬಳಿ ಹೇಳಿಕೆ ನೀಡಿದ ಸಿಎಂ ‘ಯಡಿಯೂರಪ್ಪಗೆ ಮಾಡಕ್ಕೆ ಬೇರೆ ಕೆಲಸವಿಲ್ಲ. ತಾವೊಬ್ಬರೇ ದೇಶ ಉದ್ಧಾರ ಮಾಡ್ತೀವಿ ಅಂದ್ಕೊಂಡಿದ್ದಾರೆ. ರಾಜ್ಯದ ಜನತೆ ಇವರಿಗೆ ಬೆಂಬಲ ಕೊಡಬಾರದು’ ಎಂದಿದ್ದಾರೆ.
ಅಷ್ಟೇ ಅಲ್ಲದೆ, ಸ್ವಾರ್ಥಕ್ಕಾಗಿ ತಾನು ಮುಖ್ಯಮಂತ್ರಿಯಾಗಿಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಸಿಎಂ ಆಗಿದ್ದೇನೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಿದ ಮೇಲೆ ಸಾಲ ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.