Publish Date: Wed, 30 May 2018 (10:05 IST)
Updated Date: Wed, 30 May 2018 (10:06 IST)
ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ಸಿಎಂ ಕುಮಾರಸ್ವಾಮಿ ಕೊನೆಗೂ ಇಂದು ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಇಂದು ಮಧ್ಯಾಹ್ನದ ವೇಳೆ ಸಿಎಂ ರೈತರಿಗೆ ಗುಡ್ ನ್ಯೂಸ್ ಕೊಡಲಿದ್ದಾರೆ ಎಂದು ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿದ್ದಾರೆ. ಜೆಪಿ ನಗರದ ಸಿಎಂ ನಿವಾಸಕ್ಕೆ ಭೇಟಿ ನೀಡಿ ಕುಮಾರಸ್ವಾಮಿ ಜತೆ ಚರ್ಚೆ ನಡೆಸಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.
ರೈತರ ಸಾಲಮನ್ನಾ ಕುರಿತಂತೆ ಸಿಎಂ ಕಾಲಾವಕಾಶ ಕೇಳಿದ್ದರು. ಇಂದು ಬಿಜೆಪಿ ಮತ್ತು ರೈತ ನಾಯಕರೊಂದಿಗೆ ಸಿಎಂ ಸಭೆ ನಡೆಸಲಿದ್ದಾರೆ. ಬಳಿಕ ಮಹತ್ವದ ನಿರ್ಧಾರ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.