Publish Date: Fri, 01 Jun 2018 (09:29 IST)
Updated Date: Fri, 01 Jun 2018 (09:30 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದು ಮಧ್ಯಾಹ್ನ ರಾಜ್ಯಪಾಲರ ಭೇಟಿಗೆ ಸಮಯ ನಿಗದಿ ಮಾಡಿಕೊಂಡಿದ್ದಾರೆ. ಸಿಎಂ ರಾಜ್ಯಪಾಲರ ಭೇಟಿ ಕಾರ್ಯಕ್ರಮ ಕುತೂಹಲ ಕೆರಳಿಸಿದೆ.
ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆಯ ಮೊದಲ ಹಂತ ಹೆಚ್ಚು ಕಡಿಮೆ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಸಿಎಂ ಎಚ್ ಡಿಕೆ ರಾಜ್ಯಾಪಲರ ಭೇಟಿಯಾಗಲು ಸಮಯ ಕೇಳಿದ್ದಾರೆ.
ಹೀಗಾಗಿ ಸಿಎಂ ಕುಮಾರಸ್ವಾಮಿ ಇಂದು ಕಬ್ಬು ಬೆಳೆಗಾರರ ಜತೆ ಮತ್ತು ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಸಮೀಕ್ಷೆಗೆ ನಡೆಸಲುದ್ದೇಶಿಸಿದ್ದ ಸಭೆಯನ್ನೂ ರದ್ದುಗೊಳಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.