Publish Date: Wed, 08 Aug 2018 (07:16 IST)
Updated Date: Wed, 08 Aug 2018 (07:19 IST)
ಚೆನ್ನೈ: ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಕರುಣಾನಿಧಿಯವರ ಅಂತಿಮ ದರ್ಶನ ಪಡೆಯಲು ಗಣ್ಯಾತಿ ಗಣ್ಯರು ಆಗಮಿಸಲಿದ್ದಾರೆ.
ರಾಜಾಜಿಹಾಲ್ ನಲ್ಲಿ ಕರುಣಾನಿಧಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಅಭಿಮಾನಿಗಳು ಈಗಾಗಲೇ ಕರುಣಾನಿಧಿ ಅಂತಿಮ ದರ್ಶನಕ್ಕೆ ಬರುತ್ತಿದ್ದಾರೆ.
ತಮಿಳುನಾಡು ಸಿಎಂ ಪಳನಿಸ್ವಾಮಿ ಬೆಳ್ಳಂ ಬೆಳಿಗ್ಗೆಯೇ ಅಂತಿಮ ದರ್ಶನ ಪಡೆದರು. ಇಂದು ಪ್ರಧಾನಿ ಮೋದಿ, ಕಾಂಗ್ರೆಸ್ ಅಧ‍್ಯಕ್ಷ ರಾಹುಲ್ ಗಾಂಧಿ, ದೆಹಲಿ ಸಿಎಂ ಕೇಜ್ರಿವಾಲ್, ಕರ್ನಾಟಕ ಸಿಎಂ ಕುಮಾರಸ್ವಾಮಿ ಸೇರಿದಂತೆ ಗಣ್ಯರ ದಂಡೇ ಅಂತಿಮ ದರ್ಶನಕ್ಕೆ ಹರಿದುಬರಲಿದೆ. ಜೆಡಿಎಸ್ ವರಿಷ್ಠ ದೇವೇಗೌಡರು ಈಗಾಗಲೇ ಕರುಣಾನಿಧಿ ನಿಧನಕ್ಕೆ ಸಂತಾಪ ಸಲ್ಲಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.