Publish Date: Mon, 13 Aug 2018 (08:36 IST)
Updated Date: Mon, 13 Aug 2018 (08:37 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದು ತಮ್ಮ ಹುಟ್ಟೂರು ಹರದನಹಳ್ಳಿಗೆ ಭೇಟಿ ನೀಡುತ್ತಿದ್ದು, ಗ್ರಾಮ ತಮ್ಮ ಊರಿನ ಮಗನನ್ನು ಸ್ವಾಗತಿಸಲು ಸಜ್ಜಾಗಿದೆ.
ಸಿಎಂ ಆದ ಬಳಿಕ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ತವರಿಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಸಹಜವಾಗಿಯೇ ಗ್ರಾಮಸ್ಥರಲ್ಲಿ ಸಂಭ್ರಮ ಮನೆ ಮಾಡಿದೆ.
ನಿನ್ನೆ ರಾತ್ರಿಯೇ ಹಾಸನಕ್ಕೆ ಆಗಮಿಸಿದ್ದ ಸಿಎಂ ಇಲ್ಲಿಯೇ ತಂಗಿದ್ದರು. ಇಂದು ಬೆಳಿಗ್ಗೆ ಹರದನಹಳ್ಳಿಗೆ ಹೋಗಿ ಅಲ್ಲಿನ ಶಿವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.