Publish Date: Wed, 20 Jun 2018 (08:54 IST)
Updated Date: Wed, 20 Jun 2018 (08:55 IST)
ಬೆಂಗಳೂರು: ರೈತರ ಸಾಲಮನ್ನಾ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕೊಟ್ಟ ಮಾತಿಗೆ ತಪ್ಪಲ್ಲ ಎಂದು ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ಜತೆಗೆ ಸಂವಾದ ನಡೆಸುವಾಗ ಸ್ಪಷ್ಟಪಡಿಸಿದ್ದಾರೆ.
ಮುಂದಿನ ತಿಂಗಳು ಬಜೆಟ್ ಮಂಡಿಸಲಿದ್ದು, ಆ ಸಂದರ್ಭದಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಈಗಾಗಲೇ ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರದ ನೆರವು ಕೋರಿದ್ದೇನೆ. ಸಾಲಮನ್ನಾದ ಹೊರೆ ಯಾರಿಗೂ ಆಗದಂತೆ ನೋಡಿಕೊಳ್ಳಲಾಗುವುದು. ಸಹಕಾರ, ಮಧ್ಯವರ್ತಿಗಳಿಗೆ ಇದರ ಲಾಭವಾಗದಂತೆ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.