Publish Date: Sat, 05 May 2018 (06:40 IST)
Updated Date: Sat, 05 May 2018 (06:43 IST)
ದಾವಣಗೆರೆ : ಮೇ 12ರಂದು ವಿಧಾನ ಸಭಾ ಚುನಾವಣಾ ಹಿನ್ನಲೆಯಲ್ಲಿ ಬಿಜೆಪಿ ಶುಕ್ರವಾರ ತನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಆದರೆ ಇದೀಗ ಸಿಎಂ ಸಿದ್ದರಾಮಯ್ಯನವರು ಬಿಜೆಪಿಯವರು ನಮ್ಮ ಪ್ರಣಾಳಿಕೆಯನ್ನು ಕಾಪಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಚನ್ನಗಿರಿ ವಿಧಾನಸಭಾ ಕ್ಷೇತ್ರದ ಸಂತೆಬೆನ್ನೂರಿನಲ್ಲಿ ಮಾತನಾಡಿದ ಅವರು,’ 2008 ರಲ್ಲಿ ಬಿಜೆಪಿ ಪ್ರಣಾಳಿಕೆಯ ಭರವಸೆಯನ್ನು ಪೂರ್ಣಗೊಳಿಸಿರಲಿಲ್ಲ. ನಾವು ಇಂದಿರಾ ಕ್ಯಾಂಟಿನ್ ಆರಂಭ ಮಾಡಿದ್ದೇವೆ. ಅವರು ಹೊಸ ಪ್ರಣಾಳಿಕೆಯಲ್ಲಿ ಅನ್ನಪೂರ್ಣ ಕ್ಯಾಂಟಿನ್ ತೆಗೆಯುತ್ತೇವೆ ಅಂದಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಸಾಲಾ ಮನ್ನಾ ಮಾಡಲಿಲ್ಲ. ಈಗ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ನಾಟಕ ಮಾಡುತ್ತಿದ್ದಾರೆ. ಯಡಿಯೂರಪ್ಪ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಬರೀ ಸೈಕಲ್ ಕೂಟ್ವಿ, ಸೀರೆ ಕೊಟ್ವಿ ಅಂತ ಹೇಳುತ್ತಾರೆ. ನಾವು ಕೊಟ್ಟ ಪ್ರಣಾಳಿಕೆಯ 165 ಭರವಸೆಗಳನ್ನು ಪೂರೈಸಿದ್ದೇವೆ. ಇದರ ಬಗ್ಗೆ ಯಡಿಯೂರಪ್ಪ ಚರ್ಚೆಗೆ ಬರಲಿ. ಕೇಂದ್ರ ಬಿಜೆಪಿ ನಾಯಕರು ಸೇರಿದಂತೆ ಬೇರೆ ರಾಜ್ಯಗಳಲ್ಲಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಮೊದಲು ಈಡೇರಿಸಲಿ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ