Publish Date: Wed, 25 Apr 2018 (09:07 IST)
Updated Date: Wed, 25 Apr 2018 (12:19 IST)
ಮೈಸೂರು: ಮೇ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ತಮ್ಮ ತವರು ಮೈಸೂರು ಜಿಲ್ಲೆಯಲ್ಲಿ ಭರ್ಜರಿ ಪ್ರವಾಸ ಮಾಡಲಿದ್ದಾರೆ.
ಮೈಸೂರಿನಲ್ಲಿ ಮತ್ತೆ ರೋಡ್ ಶೋ ನಡೆಸಲಿರುವ ಸಿಎಂ ಸಿದ್ದರಾಮಯ್ಯ ಹಳ್ಳಿ ಹಳ್ಳಿಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಪ್ರಮುಖವಾಗಿ ತಾವು ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರದಲ್ಲೂ ರೋಡ್ ಶೋ ನಡೆಸಲಿದ್ದಾರೆ.
ಇನ್ನೊಂದೆಡೆ ಇಂದು ಜೆಡಿಎಸ್ ಕೂಡಾ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಸಮಾವೇಶ ಹಮ್ಮಿಕೊಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.