Select Your Language

Notifications

webdunia
webdunia
webdunia
Friday, 11 April 2025
webdunia

ನಡ್ಡಾ ಜತೆ ಸಿಎಂ ಮಹತ್ವದ ಮಾತುಕತೆ

ಸಂಪುಟ
ಬೆಂಗಳೂರು , ಸೋಮವಾರ, 18 ಏಪ್ರಿಲ್ 2022 (08:56 IST)
ಹುಬ್ಬಳ್ಳಿ : ನಾಯಕತ್ವದ ಬದಲಾವಣೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅಭಯ ನೀಡಿದ್ದಾರೆ.

ಖಾಸಗಿ ಹೋಟೆಲ್ನಲ್ಲಿ ಸಂಪುಟ ವಿಸ್ತರಣೆ ಬಗ್ಗೆ ನಡ್ಡಾ ಸಿಎಂ ಮಧ್ಯೆ ಸುಮಾರು 35 ನಿಮಿಷಗಳ ಕಾಲ ಮಹತ್ವದ ಚರ್ಚೆ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳಂಕರಹಿತ, ಜನಪರ ಆಡಳಿತ ಕೊಡಿ.

ನಾಯಕತ್ವದ ಬದಲಾವಣೆ ಬಗ್ಗೆ ಚಿಂತಿಸದಿರಿ. ಮುಂದಿನ ಚುನಾವಣೆಯಲ್ಲಿ ಪಕ್ಷ ನಿಚ್ಚಳ ಬಹುಮತದೊಂದಿಗೆ ಗೆದ್ದು ಅಧಿಕಾರಕ್ಕೆ ಬರುವುದರ ಬಗ್ಗೆ ನಿಮ್ಮ ಲಕ್ಷ್ಯ ಆಗಿರಲಿ ಎಂದು ಸಲಹೆ ನೀಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ದೆಹಲಿಗೆ ಹೋದ ಬಳಿಕ ಸಂಪುಟ ಪುನಾರಚನೆಗೆ ಮುಹೂರ್ತ ತಿಳಿಸುತ್ತೇನೆ. ಈ ಬಾರಿ ಎಲೆಕ್ಷನ್ ಕ್ಯಾಬಿನೆಟ್ ರಚನೆ ಆಗುತ್ತದೆ. ಸಂಪುಟ ಪುನಾರಚನೆ ಬಗ್ಗೆ ಈಗಾಗಲೇ ಹೈಕಮಾಂಡ್ ಒಲವು ತೋರಿದ್ದು, ಬಹುತೇಕ ಈ ತಿಂಗಳ ಅಂತ್ಯಕ್ಕೆ ಸಂಪುಟ ವಿಸ್ತರಣೆ ಮಾಡುವುದು ಎಂದು ಸುಳಿವು ನೀಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಲಿಫ್ಟ್ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ !